ಅನಂತ್ ಕುಮಾರ್ ಅವರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ ಗಣ್ಯಾತಿಗಣ್ಯರು

ಈ ಸುದ್ದಿಯನ್ನು ಶೇರ್ ಮಾಡಿ

Anant-Kumar--011

ಬೆಂಗಳೂರು, ನ.12- ಕ್ಯಾನ್ಸರ್ ರೋಗದಿಂದ ನಿಧನರಾದ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರದಲ್ಲಿ ಕೇಂದ್ರ ಸಂಪುಟದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ಆಗಮಿಸಿ ಅನಂತಕುಮಾರ್ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಇಂದು ಸಂಜೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಸಹಪಾಠಿ ಅನಂತ್ ಕುಮಾರ್ ಅವರ ಅಂತಿಮ ದರ್ಶನ ಪಡೆದು ಅವರ ಕುತುಬಕ್ಕೆ ಸಾಂತ್ವಾನ ಹೇಳಿದರು. ನಾಳೆ ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಜೆ.ಪಿ.ನಡ್ಡಾ, ಉಮಾ ಭಾರತಿ, ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ದೇವೇಂದ್ರ ಫಡ್ನವೀಸ್, ನಿತೀಶ್ ಕುಮಾರ್, ಶಿವರಾಜ್ ಸಿಂಗ್ ಚೌಹಾಣ್, ವಸುಂಧರಾ ರಾಜೇ, ಡಾ.ರಮಣ್ ಸಿಂಗ್, ರಘುವಂಶ ಪ್ರಸಾದ್, ಮನೋಹರ್ ಲಾಲ್ ಕಟ್ಟರ್ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೇರಿದಂತೆ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ. ಪ್ರಧಾನಿಯವರು ಅನಂತ್ ಕುಮಾರ್ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುತ್ತಿರುವ ಕಾರಣ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

# ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ

ಕ್ಯಾನ್ಸರ್ ರೋಗದಿಂದ ಇಂದು ಮುಂಜಾನೆ ನಿಧನರಾದ ಕೇಂದ್ರ ಸಚಿವ ಹಾಗೂ ಸಹೋದ್ಯೋಗಿ ಅನಂತ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಕಂಬನಿ ಮಿಡಿದರು. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಮೋದಿ ಅವರು, ಬಸವನಗುಡಿಯಲ್ಲಿರುವ ಅನಂತ್ ಕುಮಾರ್ ನಿವಾಸಕ್ಕೆ ಬಂದು ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಮೋದಿ ಅವರು, ಆಗಲಿದ ತಮ್ಮ ಸಹೋದ್ಯೋಗಿಯನ್ನು ನೆನೆದು ಒಂದು ಕ್ಷಣ ಗದ್ಗೀತರಾದರು.

ಅಂತಿಮ ನಮನದ ವೇಳೆ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿ ನಿ ಅನಂತ್ ಕುಮಾರ್ ಹಾಗೂ ಪುತ್ರಿಯರು ಸೇರಿದಂತೆ ಅವರ ಕುಟುಂಬದ ವರ್ಗದವರಿಗೆ ಸಾಂತ್ವನ ಹೇಳಿದರು. ಈ ವೇಳೆ ತೇಜಸ್ವಿ ನಿ ಅನಂತ್ ಕುಮಾರ್ ಪತಿಯನ್ನು ನೆನೆಸಿಕೊಂಡು ಗೊಳಾಡುತ್ತಿದ್ದ ದೃಶ್ಯ ನೆರೆದಿದ್ದವರನ್ನು ಸಹಾ ಕಂಬನಿ ಮಿಡಿಯುವಂತೆ ಮಾಡಿತು. ಕೊನೆಗೆ ಮೋದಿ ಅವರೇ ಅನಂತ್ ಕುಮಾರ್ ಕುಟುಂಬದ ಸದಸ್ಯರನ್ನು ಸಮಾಧಾನ ಪಡಿಸಿದರು. ಇದಕ್ಕೂ ಮುನ್ನ ಮೋದಿ ಆಗಮನದ ಹಿನ್ನಲೆಯಲ್ಲಿ ಅನಂತ್ ಕುಮಾರ್ ನಿವಾಸದ ಬಳಿ ಪೊಲೀಸರು ಭಾರೀ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿತ್ತು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )