ಒಣಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ

ಈ ಸುದ್ದಿಯನ್ನು ಶೇರ್ ಮಾಡಿ

lorryಬೆಂಗಳೂರು, ನ.13-ಒಣಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಭಾಗಶಃ ಸುಟ್ಟು ಹೋಗಿರುವ ಘಟನೆ ನಂದಿನಿಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ದಾವಣಗೆರೆಯಿಂದ ಒಣಹುಲ್ಲು ತುಂಬಿಕೊಂಡು ನಗರಕ್ಕೆ ಬರುತ್ತಿದ್ದ ಲಾರಿಯಲ್ಲಿ ಲಗ್ಗೆರೆ ಸೇತುವೆ ಬಳಿ ಬೆಂಕಿ ಕಾಣಿಸಿಕೊಂಡಿದ್ದು ಸಾರ್ವಜನಿಕರು ನೋಡಿ ಚಾಲಕನಿಗೆ ವಿಷಯ ತಿಳಿಸಿದ್ದಾರೆ.  ತಕ್ಷಣ ಚಾಲಕ ಲಾರಿಯಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎರಡು ಅಗ್ನಿ ಶಾಮಕದಳದ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ. ಆದರೂ ಲಾರಿಯು ಭಾಗಶಃ ಸುಟ್ಟುಹೋಗಿದೆ.  ಹುಲ್ಲಿಗೆ ಹೇಗೆ ಬೆಂಕಿ ತಗುಲಿತು ಎಂಬುದು ತಿಳಿದುಬಂದಿಲ್ಲ. ಈ ಬಗ್ಗೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments