ಗುಡ್ಡಕ್ಕೆ ಕಾರು ಡಿಕ್ಕಿಹೊಡೆದು ಮೂವರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಹೊನ್ನಾವರ, ನ.13- ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರವಾರದ ಆನಂದಪುರ ನಿವಾಸಿಗಳಾದ ಫಾತೀಮ (65), ರುಕಿಯಾ(45) ಹಾಗೂ ಚಾಬೂಸಾಬ್ ಮೃತಪಟ್ಟವರು.

ಗೋವಾದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದಾಗ ಇಂದು ಬೆಳಗಿನ ಜಾವ ಹೊನ್ನಾವರದ ಆರೊಳ್ಳಿ ಕ್ರಾಸ್ ಬಳಿ ಕಾರು ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಇತರೆ ಪ್ರಯಾಣಿಕರಿಗೂ ಗಾಯಗಳಾಗಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾವರ ಪೆÇಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments