ಮದುವೆಗೆ ಬಂದಿದ್ದ ಮಹಿಳೆಯ 3 ಲಕ್ಷ ರೂ. ಮೌಲ್ಯದ ಚಿನ್ನದ ಎಗರಿಸಿದ ಸರಗಳ್ಳರು..!

ಈ ಸುದ್ದಿಯನ್ನು ಶೇರ್ ಮಾಡಿ

Chain-snatchersin
ಬೆಂಗಳೂರು, ನ.14- ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಿರುಪತಿಯಿಂದ ನಗರಕ್ಕೆ ಬಂದಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ 120 ಗ್ರಾಂ ತೂಕದ ಚಿನ್ನದ ಸರವನ್ನು ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ಕಿತ್ತು ಪರಾರಿಯಾಗಿರುವ ಘಟನೆ ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ತಿರುಪತಿಯ ನಿರ್ಮಲಾ ಚಿನ್ನದ ಸರ ಕಳೆದುಕೊಂಡವರು. ಅವರು ಮಲ್ಲೇಶ್ವರಂನಲ್ಲಿ ಏರ್ಪಡಿಸಿದ್ದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದರು. ಇಂದು ಬೆಳಗ್ಗೆ 6.30ರ ಸುಮಾರಿಗೆ ಮದುವೆ ನಡೆಯುವ ಕಲ್ಯಾಣ ಮಂಟಪಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಮಲ್ಲೇಶ್ವರಂನ 8ನೇ ಮುಖ್ಯರಸ್ತೆ, 8ನೇ ಕ್ರಾಸ್‍ನಲ್ಲಿ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ಅವರ ಕತ್ತಿಗೆ ಕೈ ಹಾಕಿ ಸುಮಾರು 3 ಲಕ್ಷ ರೂ. ಮೌಲ್ಯದ 120 ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮಲ್ಲೇಶ್ವರಂ ಠಾಣೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

Facebook Comments

Sri Raghav

Admin