ಕಾವೇರಿ ನದಿಯಲ್ಲಿ ಅನಂತಕುಮಾರ್ ಚಿತಾಭಸ್ಮ ವಿಸರ್ಜನೆ

ಈ ಸುದ್ದಿಯನ್ನು ಶೇರ್ ಮಾಡಿ

Anant-Kumar--01

ಬೆಂಗಳೂರು, ನ.14- ಕ್ಯಾನ್ಸರ್‍ನಿಂದ ಬಳಲಿ ಅನಂತದಲ್ಲಿ ಲೀನನಾದ ಕೇಂದ್ರ ಸಚಿವ ಹೆಚ್.ಎನ್.ಅನಂತಕುಮಾರ್ ಅವರ ಚಿತಾಭಸ್ಮ ಇಂದು ಕಾವೇರಿ ನದಿಯಲ್ಲಿ ಲೀನವಾಯಿತು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಹೊರವಲಯದಲ್ಲಿರುವ ಪಶ್ಚಿಮ ವಾಹಿನಿ ಪ್ರದೇಶದಲ್ಲಿ ಚಿತಾಭಸ್ಮವನ್ನು ವಿಸರ್ಜಿಸಲಾಯಿತು.10 ಗಂಟೆಗೆ ಚಿತಾಭಸ್ಮದೊಂದಿಗೆ ಅನಂತಕುಮಾರ್ ಕುಟುಂಬಸ್ಥರು ಆಗಮಿಸಿದ್ದರು. ಅರ್ಚಕ ವೇ.ಬ್ರ.ಡಾ. ಭಾನುಪ್ರಕಾಶ್ ನೇತೃತ್ವದಲ್ಲಿ ಅಪರಕರ್ಮ ವಿಧಿವಿಧಾನ ಕಾರ್ಯ ನಡೆದವು.

ಈ ಕಾರ್ಯದಲ್ಲಿ ಸಂಸದ ಪ್ರತಾಪ್‍ಸಿಂಹ, ಶಾಸಕರಾದ ನಾಗೇಂದ್ರ, ರಾಮದಾಸ್ ಸೇರಿದಂತೆ ಬಿಜೆಪಿ ಮುಖಂಡರು ಭಾಗಿಯಾಗಿದ್ದರು. ಕಳೆದ ಕೆಲ ತಿಂಗಳಿಂದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಅನಂತ ಕುಮಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸೋಮವಾರ ಬೆಳಗಿನ ಜಾವ 3ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin