ನಾಳೆಯಿಂದ ಶಿರಾಡಿಘಾಟ್ ಹೆದ್ದಾರಿ ಎಲ್ಲಾ ವಾಹನಗಳ ಸಂಚಾರಕ್ಕೆ ಮುಕ್ತ

ಈ ಸುದ್ದಿಯನ್ನು ಶೇರ್ ಮಾಡಿ

Shiradi-Ghat

ಹಾಸನ. ನ.14 : ಶಿರಾಡಿ ಘಾಟಿ ಹೆದ್ದಾರಿಯಲ್ಲಿ ನಾಳೆಯಿಂದ (ನ.15) ಎಲ್ಲಾ ರೀತಿಯ ಘನ ವಾಹನಗಳಿಗೆ ಸಂಚಾರ ಮುಕ್ತಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಶಿರಾಡಿ ಘಾಟಿ ರಸ್ತೆಯಲ್ಲಿ ಘನ ವಾಹನಗಳ ಸಂಚಾರದಿಂದ ರಸ್ತೆ ಕ್ಷಮತೆ ಹಾಗೂ ಸುರಕ್ಷತೆ ಬಗ್ಗೆ ಈಗಾಗಲೇ ದ.ಕ. ಹಾಗೂ ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟಿ ರಸ್ತೆ ಸದೃಢವಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆಯಿಂದಲೇ ಘನ ವಾಹನಗಳಿಗೆ ಶಿರಾಡಿ ಸಂಚಾರ ಮುಕ್ತಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Shiradi--01 Shiradi--02 Shiradi--03 Shiradi--04

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin