ನ.18ರಂದು ರಿಸರ್ವ್ ಸಬ್‍ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

Police-Examಬೆಂಗಳೂರು, ನ.14- ನಗರ ಪೊಲೀಸ್ ಘಟಕದಲ್ಲಿ ಖಾಲಿ ಇರುವ ರಿಸರ್ವ್ ಸಬ್‍ಇನ್ಸ್‍ಪೆಕ್ಟರ್ (ಡಿಎಎಆರ್/ಸಿಎಆರ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನ.18ರಂದು ಮೂರು ಪರೀಕ್ಷಾ ಕೇಂದ್ರದಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಒಟ್ಟು 2080 ಅಭ್ಯರ್ಥಿಗಳಿಗೆ ಪತ್ರಿಕೆ-1ನ್ನು ಬೆಳಗ್ಗೆ 10.30 ರಿಂದ 12 ಗಂಟೆವರೆಗೆ ಮತ್ತು ಪತ್ರಿಕೆ-2ನ್ನು ಮಧ್ಯಾಹ್ನ 2 ಗಂಟೆಯಿಂದ 3.30ರ ವರೆಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.

ಈಗಾಗಲೇ ಅಭ್ಯರ್ಥಿಗಳಿಗೆ ಮಾಹಿತಿಯನ್ನು ಇಲಾಖಾ ವೆಬ್‍ಸೈಟ್ www.ksp.gov.in.ನಲ್ಲಿ ಬಿಡುಗಡೆ ಮಾಡಲಾಗಿದೆ.  ಅರ್ಹ ಅಭ್ಯರ್ಥಿಗಳು ಕರಪತ್ರವನ್ನು ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಬೇಕೆಂದು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.  ಹೆಚ್ಚಿನ ಮಾಹಿತಿಯನ್ನು ಸದರಿ ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದಾಗಿದೆ.

ಪರೀಕ್ಷಾ ಸಿದ್ಧತೆಗಾಗಿ ಈ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ  : www.examplanning.online

Facebook Comments