ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಸ್ಫೋಟ, ಚಾಲಕ ಸಜೀವ ದಹನ

ಈ ಸುದ್ದಿಯನ್ನು ಶೇರ್ ಮಾಡಿ

Lorry--01
ಶಿವಮೊಗ್ಗ, ನ.15- ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಉರುಳಿ ಸ್ಫೋಟಗೊಂಡ ಪರಿಣಾಮ ಚಾಲಕ ಸಜೀವ ದಹನಗೊಂಡಿರುವ ಘಟನೆ ಇಂದು ಮುಂಜಾನೆ ಸಾಗರದ ಮಂಡಿಗೆಹಳ್ಳದಲ್ಲಿ ನಡೆದಿದೆ. ಸಾಗರದಿಂದ ಕಾರ್ಗಲ್ ಕಡೆಗೆ ಸಿಲಿಂಡರ್ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಉರುಳಿಬಿದ್ದು ಈ ದುರಂತ ಸಂಭವಿಸಿದ್ದು, 20ಕ್ಕೂ ಹೆಚ್ಚು ಸಿಲಿಂಡರ್‍ಗಳು ಸ್ಫೋಟಗೊಂಡಿವೆ. ಸ್ಫೋಟದಿಂದ ಬೆಂಕಿ ಹತ್ತಿಕೊಂಡು ಚಾಲಕ ಸಜೀವವಾಗಿ ದಹನವಾಗಿದ್ದಾರೆ.

ಇಂಡಿಯನ್ ಗ್ಯಾಸ್ ಸಂಸ್ಥೆಗೆ ಸೇರಿದ ಲಾರಿ ಇದಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಿಂದ ಲಾರಿ ಸಂಪೂರ್ಣ ಭಸ್ಮವಾಗಿದ್ದು, ಚಾಲಕ ಯಾರು? ಲಾರಿಯಲ್ಲಿ ಎಷ್ಟು ಜನರಿದ್ದರು? ಎನ್ನುವ ಮಾಹಿತಿ ತಿಳಿದುಬಂದಿಲ್ಲ. ಚಾಲಕನ ಮೃತದೇಹ ಮಾತ್ರ ಸದ್ಯ ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin