ತಮಿಳುನಾಡಿನ 6 ಜಿಲ್ಲೆಗಳಿಗೆ ಅಪ್ಪಳಿಸಿದ ‘ಗಜ’ ಚಂಡಮಾರು, ಶಾಲಾ-ಕಾಲೇಜುಗಳಿಗೆ ರಜೆ

ಈ ಸುದ್ದಿಯನ್ನು ಶೇರ್ ಮಾಡಿ

Gaja--01

ಚೆನ್ನೈ, ನ.15- ಗಜ ಚಂಡಮಾರುತ ತಮಿಳುನಾಡಿನ ಆರು ಜಿಲ್ಲೆಗಳಿಗೆ ಅಪ್ಪಳಿಸಿದ್ದು, ಕೆಲವೆಡೆ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಆರು ಜಿಲ್ಲೆಗಳಲ್ಲಿ ರಜೆ ಘೋಷಿಸಿದೆ. ಗಜ ಚಂಡಮಾರುತ ಪಶ್ಚಿಮ ಮತ್ತು ನೈರುತ್ಯ ದಿಕ್ಕಿನತ್ತ ಪ್ರತಿ ಗಂಟೆಗೆ 10 ಕಿಮೀ ವೇಗದಲ್ಲಿ ಚಲಿಸುತ್ತಿದ್ದು, ಚೆನ್ನೈನಿಂದ 490 ಕಿಮೀ ಮತ್ತು ನಾಗಪಟ್ಟಿಂನಿಂದ ಪೂರ್ವ ಮತ್ತು ಈಶಾನ್ಯ ದಿಕ್ಕಿಗೆ ಬೀಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತ ಪಶ್ಚಿಮ ಮತ್ತು ನೈರುತ್ಯ ದಿಕ್ಕಿಗೆ ಚಲಿಸಿದ ನಂತರ ಮುಂದಿನ 12 ಗಂಟೆಗಳಲ್ಲಿ ಅದರ ಪರಿಣಾಮ ತೀವ್ರವಾಗಿರುತ್ತದೆ. ನಂಚರ ಅದು ಪಂಬನ್ ಮತ್ತು ಕದ್ದಲೂರುಗಳಲ್ಲಿ ನೆಲೆಯಾಗಲಿದೆ. ಚಂಡಮಾರುತದಿಂದಾಗಿ ಕದ್ದಲೂರು, ತಂಜಾವೂರು, ತಿರುವರೂರು, ನಾಗಪಟ್ಟಿಣಂ, ಪುದುಕೊಟ್ಟೆ ೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಇದೇ ವೇಳೆ ಚಂಡಮಾರುತ ಪ್ರತಿ ಗಂಟೆಗೆ 100 ಕಿಮೀ ವೇಗದಲ್ಲಿ ತಮಿಳುನಾಡಿನ ಉತ್ತರ ಕರಾವಳಿ ಭಾಗದಲ್ಲಿ ಅಪ್ಪಳಿಸಲಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಚಂಡಮಾರುತದಿಂದಾಗಿ ನಾಗಪಟ್ಟಿಂ, ತಂಜಾವೂರು, ಪುದುಕೊಟ್ಟೆ ೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳಲ್ಲಿ ಸಮುದ್ರ ನೀರಿನ ಒಳಹರಿವು ಹೆಚ್ಚಾಗಲಿದೆ. ಇದರಿಂದ ಗುಡಿಸಲುಗಳು, ವಿದ್ಯುತ್ ಮತ್ತು ಟೆಲಿಕಾಂ ಕೇಬಲ್ ಸೇವೆಗಳಿಗೆ ಹಾನಿಗೀಡಾಗಬಹುದು. ಗಿಡ-ಮರಗಳು ನೆಲಕ್ಕುರುಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ. ಚಂಡಮಾರುತದಿಂದ ತಮಿಳುನಾಡಿನಾದ್ಯಂತ ಇನ್ನು ಎರಡು-ಮೂರು ದಿನಗಳವರೆಗೆ ವ್ಯಾಪಕ ಮಳೆಯಾಗುವ ಸೂಚನೆ ಇರುವುದರಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.

Facebook Comments

Sri Raghav

Admin