ಕಾರು ಡಿಕ್ಕಿ ಹೊಡೆದು ಮಹಿಳೆ ಡಿಕ್ಕಿ

ಈ ಸುದ್ದಿಯನ್ನು ಶೇರ್ ಮಾಡಿ

carಮಳವಳ್ಳಿ, ನ.15-ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಲಮಾಕನಹಳ್ಳಿ ಗ್ರಾಮದ ನಿವಾಸಿ ನಾಗರತ್ನಮ್ಮ (46) ಮೃತಪಟ್ಟ ದುರ್ದೈವಿ. ನಾಗರತ್ನಮ್ಮ ತಮ್ಮ ಜಮೀನಿಗೆ ತೆರಳಿ ವಾಪಸ್ ಮನೆಗೆ ಹಿಂತಿರುಗುತ್ತಿದ್ದಾಗ ನಲಮಾಕನಹಳ್ಳಿ ಗೇಟ್ ಬಳಿ ರಸ್ತೆ ದಾಟುತ್ತಿದ್ದಾಗ ಅತಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ನಾಗರತ್ನಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತ ಸಂಭವಿಸಿದ ನಂತರ ಕಾರು ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಬೈಕ್‍ನಲ್ಲಿ ಕಾರನ್ನು ಬೆನ್ನಟ್ಟಿ ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )