ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಪೇದೆ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

bikeಉಡುಪಿ, ನ.15-ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಕಾನ್‍ಸ್ಟೇಬಲ್ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಂಬದಕೋಣಿ ಬಳಿ ನಡೆದಿದೆ. ಬೈಂದೂರು ಪೊಲೀಸ್ ಠಾಣೆಯ ಕಾನ್‍ಸ್ಟೇಬಲ್ ನಾಗೇಶ್ ಬಿಲ್ಲವ ಮೃತಪಟ್ಟ ದುರ್ದೈವಿ.  ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಡರಾತ್ರಿ 1.30ರ ಸುಮಾರಿಗೆ ಅವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ನಾಗೇಶ್ ಸಾವನ್ನಪ್ಪಿದ್ದಾರೆ. ಮೃತರು ಐದು ತಿಂಗಳ ಹಿಂದೆಯಷ್ಟೇ ವಿವಾಹಿತರಾಗಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments