ಪ್ರಿಯಾಂಕ್ ಖರ್ಗೆಗೆ ಇಂಟೆಲ್ ತಂತ್ರಜ್ಞಾನ ವಿಷನರಿ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

pryankaಬೆಂಗಳೂರು,ನ.16- ಇಂಟೆಲ್ ಸಂಸ್ಥೆ ನೀಡುವ ಪ್ರತಿಷ್ಠಿತ ತಂತ್ರಜ್ಞಾನ ವಿಷನರಿ ಪ್ರಶಸ್ತಿಗೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಆಯ್ಕೆಯಾಗಿದ್ದಾರೆ. ಇಂದು ಸಂಜೆ ಬೆಳ್ಳಂದೂರಿನ ದೇವರಬೀಸನಹಳ್ಳಿಯ ಇಂಟೆಲ್ ಸಂಸ್ಥೆಯ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂಟೆಲ್ ಸಂಸ್ಥೆ ಭಾರತದಲ್ಲಿ ಯಶಸ್ವಿಯಾಗಿ ಎರಡು ದಶಕಗಳನ್ನು ಪೂರೈಸಿದ್ದು, ಈ ಸಂದರ್ಭದಲ್ಲಿ ಸಂಸ್ಥೆಗೆ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಸಹಕಾರವನ್ನು ಸ್ಮರಿಸಿ ಈ ಗೌರವ ನೀಡಲಾಗುತ್ತಿದೆ. ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವರಾಗಿದ್ದಾಗ ಈ ಕ್ಷೇತ್ರದ ಬೆಳವಣಿಗೆಗೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ತಂತ್ರಜ್ಞಾನ ವಿಷನರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Facebook Comments