ಅಪ್ರಾಪ್ತರು ವಾಹನ ಚಲಾಯಿಸಿದರೆ ಪಾಲಕರ ವಿರುದ್ದ ಪ್ರಕರಣ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

viecalತುಮಕೂರು,ನ.16-ವಾಹನ ಚಾಲನಾ ಪರವಾನಗಿ ಇಲ್ಲದಿರುವ ಅಪ್ರಾಪ್ತ ಶಾಲಾಕಾಲೇಜುಗಳ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡಲು ಪೋಷಕರು ನೀಡಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ ಗೋಪಿನಾಥ್ ಸೂಚಿಸಿದ್ದಾರೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ.

ಸಂಚಾರಿ ನಿಯಮಗಳನ್ನು ಪಾಲಿಸುವ ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಯಾವಾಗಲೂ ಬೆನ್ನೆಲುಬಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಅಪ್ರಾಪ್ತ ವಿದ್ಯಾರ್ಥಿಗಳು ವಾಹನ ಚಾಲನ ಪರವಾನಗಿ ಇಲ್ಲದೆ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡಿದ್ದು ಕಂಡುಬಂದಲ್ಲಿ ಅವರ ಪೋಷಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದರು.

ತುಮಕೂರು ನಗರದಲಿ ಇತ್ತೀಚೆಗೆ ಅಪ್ರಾಪ್ತ ವಯಸ್ಸಿನವರು ಅಪಾಯಕಾರಿಯಾಗಿ ವಾಹನಗಳನ್ನು ಚಾಲನೆ ಮಾಡುತ್ತಾ ಸಂಚಾರಿ ನಿಯಮಗಳನ್ನುಉಲ್ಲಂಘಿಸುತ್ತಿರುವುದು ಕಂಡುಬಂದಿದ್ದು, ಅಂಥವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ನಗರದಲ್ಲಿ ಅಪಾಯಕಾರಿ ವಾಹನ ಚಾಲನೆ ಮಾಡುತ್ತಿರುವವರ ಬಗ್ಗೆ ವಿಶೇಷ ಅಭಿಯಾನ ನಡೆಸಿರುವ ಪೊಲೀಸರು ಅಕ್ಟೋಬರ್‍ನಿಂದ ಇದುವರೆಗೂ ಅಪ್ರಾಪ್ತ ವಯಸ್ಸಿನವರ ವಿರುದ್ಧ 252 ಪ್ರಕರಣಗಳನ್ನು ದಾಖಲು ಮಾಡಿ 1.26 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಲಾಯಿಸಲು ನೀಡಿರುವ ಪಾಲಕರ ವಿರುದ್ದ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಇನ್ನಾದರೂ ಪೋಷಕರು ಎಚ್ಚೆತ್ತುಕೊಂಡು ತಮ್ಮ ಮಕ್ಕಳಿಗೆ ಸಂಚಾರ ನಿಯಮ ಪಾಲಿಸಲು ತಿಳುವಳಿಕೆ ನೀಡಬೇಕೆಂದು ಕರೆ ನೀಡಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )