ರಾಜ್ಯದ ಸ್ಥಿತಿ ಅವಲೋಕಿಸಿದ ಕೇಂದ್ರ ಬರ ಅಧ್ಯಯನ ತಂಡ

ಈ ಸುದ್ದಿಯನ್ನು ಶೇರ್ ಮಾಡಿ

kolar dcಬೆಂಗಳೂರು, ನ.17-ರಾಜ್ಯದಲ್ಲಿ ಉದ್ಭವಿಸಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಬರ ಅಧ್ಯಯನ ತಂಡ ಇಂದು ಕೋಲಾರ, ಧಾರವಾಡ, ಬೆಳಗಾವಿ, ವಿಜಯಪುರ ಹಾಗೂ ಗದಗ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

#ಕೋಲಾರ: ಕೃಷಿ ಇಲಾಖೆಯ ಮಾನಸ್ ಚೌಧರಿ, ಆಹಾರ ಇಲಾಖೆಯ ಸುಭಾಷ್‍ಚಂದ್ರ, ಮೀನಾ, ಕೋಲಾರ ಜಿಲ್ಲಾಧಿಕಾರಿ ಮಂಜುನಾಥ್, ಸಿಇಒ ಜಗದೀಶ್ ಅವರನ್ನೊಳಗೊಂಡ ತಂಡ ಅಮೇರಹಳ್ಳಿ, ಮಧುವತ್ತಿ, ಕಾಚಗಾನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ಪರಿಶೀಲನೆ ನಡೆಸಿತು.
ಈ ವೇಳೆ ಉದ್ಯೋಗ ಖಾತ್ರೆ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು, ಕೃಷಿ ಹೊಂಡ ಸೇರಿದಂತೆ ಮತ್ತಿತರ ಕೃಷಿ ಚಟುವಟಿಕೆಗಳ ಬಗ್ಗೆ ಕೇಂದ್ರ ತಂಡ ಅಧ್ಯಯನ ನಡೆಸಿತು.

ಕೇಂದ್ರ ಕೃಷಿ ಸಚಿವಾಲಯದ ಕಾರ್ಯದರ್ಶಿ ಅಮಿತಾಬ್ ಗೌತಮ್ ನೇತೃತ್ವದ ಇನ್ನೊಂದು ತಂಡ ಇಂದು ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳು ಈ ತಂಡಕ್ಕೆ ಬೆಳೆ ನಷ್ಟ ಹಾಗೂ ಇತರ ಹಾನಿಗಳ ಬಗ್ಗೆ ಮಾಹಿತಿ ಒದಗಿಸಿದರು. ರೈತರೊಂದಿಗೆ ಮಾಹಿತಿ ಪಡೆದ ತಂಡ ನಾಳೆ ಬಳ್ಳಾರಿ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಭೇಟಿ ನೀಡಲಿದೆ.

ರಾಜ್ಯದಲ್ಲಿ 100 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಸಂಬಂಧ ಕಳೆದ ತಿಂಗಳು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹಾಗೂ ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಬರ ಪರಿಸ್ಥಿತಿಯ ಬಗ್ಗೆ ವಿವರ ನೀಡಿದ್ದರು.
ಮಾತ್ರವಲ್ಲ, ಎನ್‍ಡಿಆರ್‍ಎಫ್ ನಿಧಿಯಿಂದ 2,434 ಕೋಟಿ ರೂ. ಪರಿಹಾರವಾಗಿ ಒದಗಿಸಲು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬರ ಅಧ್ಯಯನಕ್ಕಾಗಿ ತಂಡವನ್ನು ರಾಜ್ಯಕ್ಕೆ ಕಳುಹಿಸಿದೆ. ಈ ತಂಡ ಇಂದಿನಿಂದ ಇದೇ 19ರವರೆಗೆ ರಾಜ್ಯದ ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ನೀಡಲಿದೆ.

Facebook Comments