ಬ್ಯಾಂಕ್’ಗಳು ರೈತರಿಗೆ ಕಿರುಕುಳ ನೀಡಿದರೆ ಬಳಿ ಇರುವ ಅಸ್ತ್ರಗಳನ್ನು ಪ್ರಯೋಗಿಸುತ್ತೇವೆ ಹುಷಾರ್’

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy---01

ದಾವಣಗೆರೆ, ನ.17-ರೈತರಿಗೆ ಬ್ಯಾಂಕ್‍ಗಳು ಕಿರುಕುಳ ನೀಡಿದರೆ ಸಹಿಸುವುದಿಲ್ಲ. ಈ ಉದ್ಧಟತನ ಮುಂದುವರೆದರೆ ನಮ್ಮ ಬಳಿ ಕೆಲವು ಅಸ್ತ್ರಗಳಿವೆ. ಅದನ್ನು ಪ್ರಯೋಗಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಯಾಂಕ್‍ನವರು ನಮ್ಮ ಆದೇಶಕ್ಕೆ ಬೆಲೆ ಕೊಡದಿದ್ದರೆ ಸರ್ಕಾರದ ಎಫ್‍ಡಿ ಖಾತೆಯನ್ನು ವಾಪಸ್ ಪಡೆಯುವ ಪರಿಸ್ಥಿತಿ ಬರುತ್ತದೆ ಎಂದು ಹೇಳಿದರು.

ಈಗಾಗಲೇ ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರ ಪೀಡಿತ ಎಂದು ಗುರುತಿಸಲಾಗುತ್ತದೆ 16 ಸಾವಿರ ಕೋಟಿ ರೂ. ಬೆಳೆ ನಷ್ಟವಾಗಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಳೆದ ತಿಂಗಳೇ ಕಂದಾಯ ಸಚಿವರು ವರದಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿ ಇಂದು ಕೋಲಾರದಲ್ಲಿ ಅಧ್ಯಯನ ನಡೆಸುತ್ತಿರುವ ತಂಡ ನಾಳೆ ದಾವಣಗೆರೆಗೆ ಬರಲಿದೆ. ಅವರು ಕೇಂದ್ರಕ್ಕೆ ಯಾವ ವರದಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದಲ್ಲಿ ಒಂದು ಕಡೆ ಮುಂಗಾರು ಮಳೆ ಉತ್ತಮವಾಗಿ ಜಲಾಶಯಗಳು ಭರ್ತಿಯಾಗಿದ್ದರೆ ಮತ್ತೊಂದೆಡೆ ಬೆಳೆ ನಾಶ , ಮಳೆ ಕೊರತೆ ಎದುರಾಗಿದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸಂಭವಿಸಿದ ಅತಿವೃಷ್ಟಿ ನಿರ್ವಹಣೆಗೆ ಆರ್ಥಿಕ ನೆರವು ಕೇಂದ್ರದಿಂದ ಬಂದಿಲ್ಲ. ರಾಜ್ಯಸರ್ಕಾರವೇ 250 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಬರಗಾಲ ಎದುರಿಸುತ್ತಿರುವ ತಾಲ್ಲೂಕುಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ 50 ಲಕ್ಷದಲ್ಲಿ ಪರಿಹಾರ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಬೇರೆ ಅರ್ಥ ಬೇಡ: ರಾಜ್ಯದಲ್ಲಿ ಮುಖ್ಯಮಂತ್ರಿಯಾಗುವ ಸಾಮಥ್ರ್ಯವಿರುವವರು ಸಾಕಷ್ಟು ಮಂದಿ ಇದ್ದಾರೆ. ಅದರಲ್ಲಿ ಪರಮೇಶ್ವರ್ ಸಹ ಒಬ್ಬರು. ಇದಕ್ಕೆ ಬೇರೆ ವ್ಯಾಖ್ಯಾನ ಬೇಡ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಗಳ ಸ್ಥಾನವೇನು ಶಾಶ್ವತವಲ್ಲ. ಅವಕಾಶ ಸಿಕ್ಕರೆ ಅಪೇಕ್ಷೆ ಹೊಂದಿದ್ದೇನೆ ಎಂದಿದ್ದಾರೆ ಅಷ್ಟೆ ಎಂದು ತಿಳಿಸಿದರು. ರಾಜ್ಯ ಬೆಳೆವಿಮೆ ಯೋಜನೆಯಲ್ಲಿನ ಲೋಪ ದೋಷದಿಂದಾಗಿ ರೈತರಿಗೆ ಅನಾನುಕೂಲವಾಗಿದೆ. ಈ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಖಾಸಗಿ ಕಂಪೆನಿಗಳ ವಿರುದ್ಧವೂ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin