ಗೂಂಡಾ ಕಾಯ್ದೆಯಡಿ ರೌಡಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

kajemohan ceirmಬೆಂಗಳೂರು,ನ.17- ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿ ಖಾಜಾಮೊಯಿನ್(23) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಆರ್‍ಎಂಸಿಯಾರ್ಡ್ ಪೊಲೀಸರು ಬಂಧಿಸಿದ್ದಾರೆ. ಈತ ನಗರದ ಆರ್‍ಎಂಸಿಯಾರ್ಡ್, ಪೀಣ್ಯ, ಯಶವಂತಪುರ, ಜೆಸಿನಗರ, ರಾಜಾಜಿನಗರ ಪೊಲೀಸ್ ಠಾಣೆಗಳಲ್ಲಿ ಸಕ್ರಿಯವಾಗಿ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಈತನ ವಿರುದ್ಧ ಕೊಲೆ ಯತ್ನ, ಸುಲಿಗೆ, ದರೋಡೆ, ಹಲ್ಲೆಯಂತಹ ಅಪರಾಧ ಪ್ರಕರಣಗಳು ದಾಖಲಾಗಿವೆ. ಈತ 2012ನೇ ಸಾಲಿನಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು, ನಗರದ 20 ಪೊಲೀಸ್ ಠಾಣೆಗಳಲ್ಲಿ 36 ಪ್ರಕರಣಗಳು ದಾಖಲಾಗಿವೆ.

ಅಲ್ಲದೆ ಈತನ ಸಹಚರರನ್ನು ಸಹ ಸುಲಿಗೆ ಪ್ರಕರಣದಲ್ಲಿ ಬಂಧಿಸಲಾಗಿದೆ.  ರೌಡಿ ಚಟುವಟಿಕೆ ಮತ್ತು ಅಪರಾಧ ಚಟುವಟಿಕೆಗಳನ್ನು ಈತ ಮುಂದುವರೆಸಿಕೊಂಡು ಸಾರ್ವಜನಿಕರಲ್ಲಿ ಭಯಭೀತಿಯನ್ನು ಉಂಟು ಮಾಡುತ್ತಿದ್ದರಿಂದ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಆರ್‍ಎಂಸಿಯಾರ್ಡ್ ಠಾಣೆ ಇನ್‍ಸ್ಪೆಕ್ಟರ್ ಮೊಹಮ್ಮದ್ ಮುಕರಾಂ ಅವರು ಈತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ವರದಿಯನ್ನು ಪರಿಶೀಲಿಸಿ ಗೂಂಡಾ ಕಾಯ್ದೆಯಡಿ ಬಂಧಿಸಲು ಆದೇಶಿಸಿದ್ದರು.

Facebook Comments