ಅಭ್ಯರ್ಥಿಗಳ ಚುನಾವಣಾ ಖರ್ಚು ದಿನಕ್ಕೆ 10 ಸಾವಿರ ಮೀರುವಂತಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

eieactionಹೈದರಾಬಾದ್,ನ.17- ತೆಲಂಗಾಣ ವಿಧಾನಸಭೆ ಚುಣಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಒಂದು ದಿನಕ್ಕೆ 10 ಸಾವಿರ ರೂ.ಕ್ಕಿಂತ ಹೆಚ್ಚು ಹಣವನ್ನು ಖರ್ಚು ಮಾಡುವಂತಿಲ್ಲ ಎಂದು ಚುನಾವಣಾ ಅಯೋಗ ಹೇಳಿದೆ. ಈಗಾಗಲೇ ತೆಲಂಗಾಣದ ಚುನಾವಣಾಧಿಕಾರಿಗೆ ಸೂಚಿಸಿ ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಬೇಕೆಂದು ಆದೇಶಿಸಿದೆ. ಈ ಹಿಂದೆ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯು ದಿನಕ್ಕೆ 20 ಸಾವಿರ ರೂ.ವರೆಗೆ ಕ್ಯಾಷ್ ವಹಿವಾಟು ನಡೆಸಲು ಅವಕಾಶವಿತ್ತು. ಇದೀಗ ಈ ಹಣವನ್ನು 10 ಸಾವಿರಕ್ಕೆ ಇಳಿಸಲಾಗಿದೆ.

ಚುನಾವಣೆಯಲ್ಲಿ ಅಕ್ರಮ ಹಣದ ಹರಿವನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ, ಒಬ್ಬ ಅಭ್ಯರ್ಥಿಯು ಚುನಾವಣೆಯಲ್ಲಿ 28 ಲಕ್ಷಕ್ಕಿಂತ ಹೆಚ್ಚು ಖರ್ಚು ಮಾಡುವಂತಿಲ್ಲ. ತೆಲಂಗಾಣದಲ್ಲಿ ವಿಧಾನಸಭೆ ಚುಣಾವಣೆ ಡಿಸೆಂಬರ್ 7ಕ್ಕೆ ಒಂದೇ ಹಂತದಲ್ಲಿ ನಡೆಯಲಿದೆ. ಡಿಸೆಂಬರ್ 11 ರಂದು ಮತ ಎಣಿಕೆ ಎಣಿಕೆಯಾಗಲಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )