‘ಕಬ್ಬು ಬೆಳೆಗಾರರ ಬಾಕಿಹಣ ನೀಡುವಂತೆ ಡಿಸಿಗೆ ಸೂಚನೆ ನೀಡಲಾಗಿದೆ’

ಈ ಸುದ್ದಿಯನ್ನು ಶೇರ್ ಮಾಡಿ

Bandeppa-Kashyampur--01
ಹುಬ್ಬಳ್ಳಿ, ನ.18- ಕಬ್ಬು ಬೆಳೆಗಾರರಿಗೆ ಬರಬೇಕಾದ ಬಾಕಿಹಣ ನೀಡುವಂತೆ ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕಬ್ಬು ದರ ನಿಗದಿ ಬಗ್ಗೆ ಈಗಾಗಲೇ ಚರ್ಚೆ ಮಾಡಿದ್ದಾರೆ. ರೈತರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಬರಬೇಕಾದ ಬಾಕಿ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

# ಆಪರೇಷನ್ ಕಮಲ ಇಲ್ಲ:
ರಾಜ್ಯದಲ್ಲಿ ಯಾವೊಬ್ಬ ಶಾಸಕರು ಬಿಜೆಪಿಗೆ ಸೇರುವ ಪ್ರಮೇಯವೇ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ ಸಚಿವರು ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಯುವುದಿಲ್ಲ. ಉಪಚುನಾವಣೆ ನಂತರ ಇದೆಲ್ಲ ಬದಲಾಗಿದೆ ಎಂದು ಹೇಳಿದರು.

ಕಬ್ಬು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಿ ಅವರಿಗೆ ಬರಬೇಕಾದ ಬಾಕಿ ಪಾವತಿಸಲು ಸರ್ಕಾರ ಸಿದ್ಧವಾಗಿದೆ. ತಾಳ್ಮೆಯಿಂದ ಇರುವಂತೆ ಮನವಿ ಮಾಡಿಕೊಂಡರು.

Facebook Comments

Sri Raghav

Admin