ಎನ್‍ಕೌಂಟರ್’ನಲ್ಲಿ ಇಬ್ಬರು ಉಗ್ರರು ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Encounterಶ್ರೀನಗರ, ನ.18-ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಂದುವರಿದಿರುವಂತೆ ಅವರನ್ನು ಸದೆಬಡಿಯುವ ಯೋಧರ ಕಾರ್ಯಾಚರಣೆಯೂ ಬಿರುಸಾಗಿದೆ. ಜಮ್ಜು ಮತ್ತು ಕಾಶ್ಮೀರದ ಶೋಫಿಯಾನ್‍ನಲ್ಲಿ ಭದ್ರತಾ ಪಡೆಗಳೊಂದಿಗೆ ಇಂದು ನಸುಕಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಅಲ್-ಬದರ್ ಭಯೋತ್ಪಾದನೆ ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ.
ಹತರಾದ ಉಗ್ರರನ್ನು ನವಾಜ್ ಅಹಮದ್ ಮತ್ತು ಯಾವರ್ ವಾನಿ ಎಂದು ಗುರುತಿಸಲಾಗಿದೆ.  ದಕ್ಷಿಣ ಕಾಶ್ಮೀರ ಜಿಲ್ಲೆಯ ಝೈನಾಪೊರಾದಲ್ಲಿ ರೆಬ್ಬಾನ್ ಪ್ರದೇಶದಲ್ಲಿ ಉಗ್ರರು ಅವಿತಿಟ್ಟುಕೊಂಡಿರುವ ಖಚಿತ ಸುಳಿವಿನ ಮೇರೆಗೆ ಯೋಧರು ನಿನ್ನೆ ರಾತ್ರಿಯಿಂದ ಆ ಸ್ಥಳವನ್ನು ಸುತ್ತುವರಿದು ಶೋಧ ನಡೆಸುತ್ತಿದ್ದರು. ಆ ಸಂದರ್ಭದಲ್ಲಿ ಮರೆಯಲ್ಲಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದಾಗ ಎನ್‍ಕೌಂಟರ್ ನಡೆಯಿತು ಎಂದು ಹಿರಿಯ ಸೇನಾಧಿಕಾರಿಯೊಬ್ಬರು ಹೇಳಿದ್ದಾರೆ.

ಎನ್‍ಕೌಂಟರ್‍ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು, ಮೃತರ ಬಳಿ ಇದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.  ಗುಂಡಿನ ಚಕಮಕಿ ಸಂದರ್ಭದಲ್ಲಿ ಪರಾರಿಯಾಗಿರುವ ಇನ್ನಿಬ್ಬರು ಉಗ್ರಗಾಮಿಗಳಿಗಾಗಿ ತೀವ್ರ ಶೋಧ ಮುಂದುವರಿದಿದೆ.

Facebook Comments