ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ ಕುಖ್ಯಾತ ರೌಡಿ ಮೇಲೆ ಫೈರಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

fireingಕಲಬುರಗಿ,ನ,18- ಬೆಳ್ಳಂಬೆಳಿಗ್ಗೆ ನಗರ ಹೊರವಲಯದ ಗ್ರೀನ್ ಸಿಟಿ ಬಳಿ ಪೊಲೀಸರ ಗುಂಡಿನ ಸದ್ದು ಮಾರ್ಧನಿಸಿದ್ದು, ಕುಖ್ಯಾತ ರೌಡಿ ಪ್ರವೀಣನ ಮೇಲೆ ಗುಂಡಿನ ದಾಳಿ ನಡೆಸಿ ಬಾಲ ಬಿಚ್ಚಿದರೆ ಹುಷಾರ್ ಎಂದು ಸಮಾಜಘಾತುಕ ಶಕ್ತಿಗಳಿಗೆ ಕಟ್ಟೆಚ್ಚರಿಕೆ ರವಾನಿಸಿದ್ದಾರೆ. ರೌಡಿ ಪ್ರವೀಣನನ್ನು ಪ್ರಕರಣವೊಂದರ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋಗುವಾಗ ಆತ ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಪೊಲೀಸ್ ಇನ್ಸ್‍ಪೆಕ್ಟರ್ ರಮೇಶ್ ಫೈರಿಂಗ್ ನಡೆಸಿದ್ದಾಗಿ ಎಸ್‍ಪಿ ಶಶಿಕುಮಾರ್ ತಿಳಿಸಿದ್ದಾರೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ವೆಂಕಟೇಶ್ ಮತ್ತು ಬಸವರಾಜು ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರದೀಪ್ 19 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದ, ಈತನ ಮೇಲೆ ಅಪಹರಣ, ಕೊಲೆ ಯತ್ನ, ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಇತ್ಯಾದಿ ಪ್ರಕರಣಗಳು ದಾಖಲಾಗಿದ್ದವು. ಗಾಯಾಳು ರೌಡಿಶೀಟರ್‍ನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೇ ವೇಳೆ ಗಾಯಾಳು ಪೊಲೀಸ್ ಸಿಬ್ಬಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Facebook Comments