ಲಾರಿ-ಐರಾವತ ಬಸ್ ನಡುವೆ ಭೀಕರ ಅಪಘಾತ : ಪ್ರಯಾಣಿಕರು ಪಾರು

ಈ ಸುದ್ದಿಯನ್ನು ಶೇರ್ ಮಾಡಿ

ksrtc busಹುಬ್ಬಳ್ಳಿ,ನ.18- ಲಾರಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಐರಾವತ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಪೂಣಾ-ಬೆಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದೆ.  ಇದರಿಂದಾಗಿ ಸುಮಾರು ಎರಡು ಘಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡು ಸಂಚಾರ ಅಸ್ತವ್ಯಸ್ಥವಾಗಿತ್ತು. ಘಟನೆಯಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದು, ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ನಗರದ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಂಗಳೂರಿನಿಂದ ಪುಣೆ ಕಡೆ ಬಸ್ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ದಕ್ಷಿಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಧಾರವಾಡ ಸಮೀಪ ನಿನ್ನೆ ಮುಂಜಾನೆ ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಮೃತಪಟ್ಟರುವ ಘಟನೆ ನಡೆದಿರುವಾಗಲೇ ಇಂದು ಈ ಘಟನೆ ನಡೆದಿರುವುದು ಎಲ್ಲರನ್ನು ಬೆಚ್ಚಿಬೀಳಿಸಿದೆ.

Facebook Comments