ಮೂವರು ಮನೆಗಳ್ಳರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Arestedಮೈಸೂರು,ನ.18-ಮನೆಗಳವು ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ಚಿನ್ನಾಭರಣ, ವಿದೇಶಿ ಕರೆನ್ಸಿ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಶಾಂತಿನಗರದ ನಿವಾಸಿ ಶಾಬ್ಹಾಜ್ ಖುರೇಷಿ(23), ಉದಯಗಿರಿಯ ಕೆಎಚ್‍ಡಿ ಕಾಲೋನಿಯ ಮೊಹಮ್ಮದ್ ಅಜರ್(23), ಕಲ್ಯಾಣಗಿರಿಯ ಟಿ.ಎಂ.ಪುರದ ಸಯ್ಯದ್ ಜಾವೀದ್(23) ಬಂಧಿತ ಆರೋಪಿಗಳು.

ಇವರು ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಬೀಗ ಒಡೆದು ಮನೆಗಳವು ಮಾಡುತ್ತಿದ್ದರು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತರು ಉದಯಗಿರಿ ಠಾಣೆ ವ್ಯಾಪ್ತಿಯ ಕಲ್ಯಾಣಗಿರಿಯ ಮನೆಯೊಂದರಲ್ಲಿ ಕಳ್ಳತನ ಮಾಡಿರುವುದು ವಿಚಾರಣೆಯಿಂದ ತಿಳಿದುಬಂದಿದೆ.

ಡಿಸಿಪಿ ವಿಕ್ರಮ್ ಆಮ್ಟೆ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಗೋಪಾಲ್ ನೇತೃತ್ವದಲ್ಲಿ ಇನ್‍ಸ್ಪೆಕ್ಟರ್ ಜಗದೀಶ್, ಎಎಸ್‍ಐ ಚಂದ್ರೇಗೌಡ, ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತು, ನಗದು ವಿದೇಶಿ ಕರೆನ್ಸಿ ಹಾಗೂ ಎಲ್‍ಸಿಡಿ ಟಿವಿಯನ್ನು ವಶಪಡಿಸಿಕೊಂಡಿದ್ದಾರೆ.

Facebook Comments