ಅಮೃತ್‍ಸರ್ : ಬಾಂಬ್ ಎಸೆದ ಬೈಕ್ ಸವಾರರು, 3 ಸಾವು, ಹಲವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Blast--01

ಅಮೃತ್‍ಸರ್, ನ.18- ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳವೊಂದರ ಮೇಲೆ ದ್ವಿಚಕ್ರ ವಾಹನ ಸವಾರರು ನಡೆಸಿದ ಬಾಂಬ್ ದಾಳಿಯಲ್ಲಿ ಮೂವರು ಮೃತಪಟ್ಟು ಹಲವರು ತೀವ್ರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಪಂಜಾಬ್‍ನ ಅಮೃತ್‍ಸರದ ಗ್ರಾಮವೊಂದರಲ್ಲಿ ನಡೆದಿದೆ.

ಅಮೃತ್‍ಸರದ ರಾಜ ಸಾರಿಸಿಯಾ ತಾಲೂಕಿನ ಅದೀವಾಲಾ ಗ್ರಾಮದ ನಿರಹಂಕಾರಿ ಭವನದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದು ನಡೆಯುತ್ತಿತ್ತು.ಇದೇ ಸಂದರ್ಭದಲ್ಲಿ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಭವನದ ಮೇಲೆ ಸ್ಫೋಟಕಗಳನ್ನು ಎಸೆದು ಪರಾರಿಯಾದರು. ಆ ಸ್ಪೋಟದಲ್ಲಿ ಮೂವರು ಮೃತಪಟ್ಟು ಎಂಟು ಜನರು ತೀವ್ರ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮಾಂತರ) ಪರಂಪಾಲ್‍ಸಿಂಗ್ ತಿಳಿಸಿದ್ದಾರೆ.
ಈ ಘಟನೆ ನಂತರ ಗ್ರಾಮದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ಹಂತಕರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Facebook Comments

Sri Raghav

Admin