ರೈತರ ಮನವಿ ಸ್ವೀಕರಿಸಿದ ಬಂಡೆಪ್ಪ ಕಾಶೆಂಪೂರ್

ಈ ಸುದ್ದಿಯನ್ನು ಶೇರ್ ಮಾಡಿ

Bandeppa--01

ಬೆಂಗಳೂರು, ನ.19- ಪ್ರತಿಭಟನೆ ನಡೆಸುತ್ತಿದ್ದ ಫ್ರೀಡಂ ಪಾರ್ಕ್‍ಗೆ ಆಗಮಿಸಿದ ಸಹಕಾರ ಸಚಿವ ರೈತರ ಮನವಿ ಸ್ವೀಕರಿಸಿ, ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಇದಕ್ಕೂ ಮೊದಲು ರೈತ ಮುಖಂಡ ಚಾಮರಸ ಮಾಲಿ ಪಾಟೀಲ್ ಮಾತನಾಡಿ, ಎರಡು ಹಂತಗಳಲ್ಲಿ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭರವಸೆ ನೀಡಿದ್ದರು. ಅದಕ್ಕೆ 15 ದಿನಗಳ ಕಾಲಾವಕಾಶ ಕೇಳಿದ್ದರು. ಆದರೆ ನಾಲ್ಕೂವರೆ ತಿಂಗಳಾದರೂ ಇದುವರೆಗೆ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿಯವರು ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ರೈತರ ಬಗ್ಗೆ ಹಗುರವಾಗಿ ನಡೆಸಿಕೊಂಡ ಬಗ್ಗೆ ನಮಗೆ ನೋವಿದೆ. ರೈತ ಮಹಿಳೆಯ ಬಗ್ಗೆ ನೀಡಿರುವ ಹೇಳಿಕೆಗಾಗಿ ಅವರು ಇಡೀ ರಾಜ್ಯದ ರೈತರ ಕ್ಷಮೆಕೋರಬೇಕು ಎಂದು ಒತ್ತಾಯಿಸಿದರು.

# ಸಿಎಂ ಪರವಾಗಿ ಕ್ಷಮೆ :
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ನಿರತ ರೈತರಲ್ಲಿ ಕ್ಷಮೆ ಕೇಳಿದ್ದಾರೆ. ಕ್ಷಮೆ ಕೇಳಿ ಮಾತನಾಡಿದ ಅವರು, ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಶೀಘ್ರದಲ್ಲೇ ಸಭೆ ಕರೆಯಲಾಗುತ್ತದೆ. ಕೊಡಗು ಸಂತ್ರಸ್ತ ರೈತರು, ಬರಗಾಲ ಪೀಡಿದ ಪ್ರದೇಶದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ಈ ಸಂಬಂಧ ರೈತ ಮುಖಂಡರ ಜೊತೆಗೆ ಪ್ರತ್ಯೇಕ ಸಭೆ ನಡೆಸುವಂತೆ ಕುಮಾರಸ್ವಾಮಿ ಅವರಿಗೆ ಕೇಳಿಕೊಂಡಿದ್ದೇನೆ ಎಂದು ಹೇಳಿದರು.

ನಮ್ಮ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಲು ಬದ್ಧವಾಗಿದೆ. ರಾಷ್ಟ್ರೀಯ ಬ್ಯಾಂಕ್‍ಗಳ ಸಾಲ ಮನ್ನಾ ಮಾಡುತ್ತೇವೆ ಅಂತ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇವತ್ತು ಸರ್ಕಾರ ಒಳ್ಳೆಯ ರೀತಿ ನಡೆಯುತ್ತಿದೆ. ಹಂತ ಹಂತವಾಗಿ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಸಚಿವರು ತಿಳಿಸಿದರು.
ಗಾಗಿ ಅವರು ಇಡೀ ರಾಜ್ಯದ ರೈತರ ಕ್ಷಮೆಕೋರಬೇಕು ಎಂದು ಒತ್ತಾಯಿಸಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin