ಮೈತ್ರಿ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡುವ ನೈತಿಕತೆ ಬಿಜೆಪಿ ಬಿಜೆಪಿಗಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

POLICE OFFICSಬೆಂಗಳೂರು, ನ.19-ನಮ್ಮ ಮೈತ್ರಿ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡುವ ಯಾವುದೇ ನೈತಿಕತೆ ಬಿಜೆಪಿ ಪಕ್ಷಕ್ಕಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಇನ್ಫೋಸಿಸ್ ಸಂಸ್ಥೆಯ ಸಹಯೋಗದಲ್ಲಿ ನವೀಕರಣಗೊಂಡ ತಿಲಕನಗರ ಪೊಲೀಸ್ ಠಾಣೆಯನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ರೈತರ 49 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕಿದರು. ಇವರ ಪಕ್ಷಕ್ಕೆ ರೈತರ ಬಗ್ಗೆ ಮಾತನಾಡುವ ಅಧಿಕಾರವಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಬಗ್ಗೆ ಹಗುರವಾಗಿ ಮಾತನಾಡಲು ಸಾಧ್ಯವಿಲ್ಲ. ಕಬ್ಬು ಬೆಳೆಗಾರರ ಹಣ ಪಾವತಿ ವಿಚಾರವಾಗಿ ನಾಳೆ ಅವರು ರೈತರ ಸಭೆ ಕರದಿದ್ದಾರೆ. ಈ ವೇಳೆ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮಕೈಗೊಳ್ಳಲಿದ್ದಾರೆ ಎಂದರು.ಕಬ್ಬು ದರ ನಿಗದಿ, ಬಾಕಿ ಪಾವತಿಗಾಗಿ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾನೂನು ಚೌಕಟ್ಟಿನಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಕಾನೂನನ್ನು ಯಾರು ಕೈಗೆ ತೆಗೆದುಕೊಳ್ಳಬಾರದು ಎಂದು ಹೇಳಿದರು.

ಆ್ಯಂಬಿಡೆಂಟ್ ಪ್ರಕರಣ ತನಿಖೆ ಹಂತದಲ್ಲಿದೆ. ಆರೋಪಿಗಳ ಪಟ್ಟಿ ಹೆಚ್ಚುತ್ತಿರುವುದರಿಂದ ತನಿಖೆ ಮುಗಿಯುವವರೆಗೂ ಏನೂ ಹೇಳಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಸಿಬಿ ಪೊಲೀಸರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಸಿಐಡಿಗೆ ವಹಿಸುವ ಸಂದರ್ಭ ಬಂದಾಗ ನೋಡೋಣ ಎಂದು ಹೇಳಿದರು.

Facebook Comments