ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ಹಾಜರಾಗುವಂತೆ ಲಾಲುಗೆ ಕೋರ್ಟ್ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Lalu-Prasad-Yadav
ನವದೆಹಲಿ, ನ.19-ಭಾರತೀಯ ರೈಲ್ವೆ ಸತ್ಕಾರ ಮತ್ತು ಪ್ರವಾಸೋದ್ಯಮ ನಿಗಮ(ಐಆರ್‍ಸಿಟಿಸಿ) ಹಗರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಡಿಸೆಂಬರ್ 20ಕ್ಕೆ ಮುನ್ನ ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಆರ್‍ಜೆಡಿ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ ದೆಹಲಿ ನ್ಯಾಯಾಲಯವೊಂದು ಇಂದು ಆದೇಶ ನೀಡಿದೆ.

ಅನಾರೋಗ್ಯ ಕಾರಣದಿಂದಾಗಿ ತಾವು ಖುದ್ದಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಲಾಲು ಸಲ್ಲಿಸಿದ ಮನವಿಯನ್ನು ಪರಿಗಣಿಸಿ ವಿಶೇಷ ನ್ಯಾಯಾಧೀಶ ಅರುಣ್ ಭಾರದ್ವಾಜ್ ಈ ನಿರ್ದೇಶನ ನೀಡಿದ್ದಾರೆ. ಲಾಲು ಅವರಿಗೆ ಚಿಕಿತ್ಸೆ ಮುಂದುವರಿದಿದ್ದಲ್ಲಿ ಆಸ್ಪತ್ರೆಯಿಂದ ಇಲ್ಲವೇ ಜೈಲಿನಿಂದ ವಿಡಿಯೋ ಕಾನ್ಫೆರೆನ್ಸ್ ವಿಚಾರಣೆಯಲ್ಲಿ ಭಾಗವಹಿಸಲು ಕೇಂದ್ರದ ಮಾಜಿ ಸಚಿವರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಗಳಿಗೆ ಕೋರ್ಟ್ ಸೂಚಿಸಿದೆ.

ಈ ಮಧ್ಯೆ, ಲಾಲು ಪ್ರಸಾದ್ ಅವರ ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿ ಯಾದವ್ ಮತ್ತಿತರರಿಗೆ ಜಾಮೀನು ನೀಡದಂತೆ ಇಡಿ ಅಧಿಕಾರಿಗಳು ನ್ಯಾಯಾಲಯವನ್ನು ಕೋರಿದ್ದಾರೆ. ಇವರಿಗೆ ಜಾಮೀನು ನೀಡಿದರೆ ಪ್ರಭಾವಿ ವ್ಯಕ್ತಿಗಳಾಗಿರುವ ಇವರು ತನಿಖೆ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಇಡಿ ಕೋರಿದೆ.

# ಹದಗೆಟ್ಟ ಲಾಲು ಆರೋಗ್ಯ :
ಜಾರ್ಖಂಡ್ ರಾಜಧಾನಿ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ರಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲು ಆರೋಗ್ಯ ಹದಗೆಡುತ್ತಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಹೇಳಿದ್ದಾರೆ. ಅವರ ಬಲಗಾಲಿನಲ್ಲಿ ಕಾಣಿಸಿಕೊಂಡಿರುವ ಹುಣ್ಣು ಉಲ್ಬಣಗೊಂಡಿದೆ. ಅಲ್ಲದೇ ಡಯಾಬಿಟಿಸ್ ಮತ್ತು ರಕ್ತದೊತ್ತಡವೂ ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Facebook Comments

Sri Raghav

Admin