ಕ್ಲಬ್‍ಗಳ ಮೇಲೆ ಸಿಸಿಬಿ ದಾಳಿ, 99,740 ರೂ. ವಶ

ಈ ಸುದ್ದಿಯನ್ನು ಶೇರ್ ಮಾಡಿ

POLICEಬೆಂಗಳೂರು, ನ.20- ಪೀಣ್ಯ ಏರಿಯಾದಲ್ಲಿರುವ ಎರಡು ಕ್ಲಬ್‍ಗಳ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು 53 ಮಂದಿಯನ್ನು ಬಂಧಿಸಿ 99,740ರೂ. ವಶಪಡಿಸಿಕೊಂಡಿದ್ದಾರೆ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾದ 1ನೆ ಹಂತದಲ್ಲಿರುವ ಶ್ರೀ ಲಕ್ಷ್ಮಿ ರಿಕ್ರಿಷಿಯೇಷನ್ ಅಸೋಸಿಯೇಷನ್ ಕ್ಲಬ್ ಹಾಗೂ ಶ್ರೀ ರಂಗನಾಥಸ್ವಾಮಿ ರಿಕ್ರಿಷಿಯೇಷನ್ ಅಸೋಸಿಯೇಷನ್ ಕ್ಲಬ್‍ನಲ್ಲಿ ಜೂಜಾಟವಾಡುತ್ತಿದ್ದಾರೆ ಎಂಬ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಎರಡು ಕ್ಲಬ್‍ಗಳ ಮೇಲೆ ದಾಳಿ ಮಾಡಿ 53 ಮಂದಿಯನ್ನು ಬಂಧಿಸಿ ಪಣಕ್ಕಿಟ್ಟಿದ್ದ 99,740ರೂ. ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್‍ಕುಮಾರ್, ಉಪ ಪೊಲೀಸ್ ಆಯುಕ್ತ ಗಿರೀಶ್, ಸಿಸಿಬಿಯ ಎಸಿಪಿ ಸುಬ್ರಹ್ಮಣ್ಯ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿತ್ತು.

Facebook Comments