14 ಕೋಟಿ ಜನರಿಗೆ ಸಾಲ ನೀಡಿದ್ದೇವೆ : ಪ್ರಧಾನಿ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

MODIಜಬುವಾ (ಮಧ್ಯಪ್ರದೇಶ), ನ.20- ತಮ್ಮ ನೇತೃತ್ವದ ಸರ್ಕಾರ ಪ್ರಧಾನಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ)ಯಡಿ ಯಾವುದೇ ಖಾತರಿ ಇಲ್ಲದೆಯೇ 14 ಕೋಟಿ ಜನರಿಗೆ ಮುಕ್ತವಾಗಿ ಸಾಲ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಚುನಾವಣೆಗೆ ಸಜ್ಜಾಗಿರುವ ಮಧ್ಯಪ್ರದೇಶದ ಜಬುವಾದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಮೋದಿ, ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು.

ಕಾಂಗ್ರೆಸ್ ಸರ್ಕಾರ 10 ವರ್ಷಗಳಲ್ಲಿ ಮಾಡಲಾಗದ ಸಾಧನೆಯನ್ನು ನಮ್ಮ ಸರ್ಕಾರ ಕೇವಲ ನಾಲ್ಕು ವರ್ಷಗಳಲ್ಲೇ ಮಾಡಿದೆ ಎಂದು ಮೋದಿ ಹೆಮ್ಮೆಯಿಂದ ಹೇಳಿಕೊಂಡರು.2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಸರ್ವರಿಗೂ ಸೂರು ಕಲ್ಪಿಸುವುದು ತಮ್ಮ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಅದನ್ನು ಕಾರ್ಯರೂಪಕ್ಕೆ ತರುವುದಾಗಿ ಪ್ರಧಾನಿ ಪುನರುಚ್ಚರಿಸಿದರು.

ಬ್ಯಾಂಕಿಂಗ್ ವ್ಯವಸ್ಥೆಗೆ ಸೇರ್ಪಡೆಯಾಗಿದ್ದ ಕಾಳಧನ ಪಿಡುಗನ್ನು ನಿವಾರಿಸಲು ಅಮಾನ್ಯೀಕರಣದ ಕಹಿ ಔಷಧಿಯನ್ನು ತಾವು ಬಳಸಬೇಕಾಯಿತು. ಇದರಿಂದ ದೇಶದಲ್ಲಿ ಆಳವಾಗಿ ಬೇರೂರಿದ್ದ ಭ್ರಷ್ಟಾಚಾರದ ರೋಗಕ್ಕೆ ಪರಿಣಾಮಕಾರಿ ಚಿಕಿತ್ಸೆ ನೀಡಲಾಗಿದೆ ಎಂದು ಪ್ರಧಾನಿ ವ್ಯಾಖ್ಯಾನಿಸಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )