ಸಾಲಬಾಧೆ ತಾಳಲಾರದೆ ವಿಷದ ಮಾತ್ರೆ ನುಂಗಿ ರೈತ ದಂಪತಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

susediಕೆ.ಆರ್.ಪೇಟೆ, ನ.20-ಸಾಲಬಾಧೆಯಿಂದ ನೊಂದ ರೈತ ದಂಪತಿ ತಮ್ಮ ಜಮೀನಿನಲ್ಲೇ ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೃಷ್ಣರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ.  ಕೆ.ಆರ್.ಪೇಟೆ ತಾಲೂಕಿನ ಬೊಮ್ಮೇನಹಳ್ಳಿ ನಿವಾಸಿಗಳಾದ ಬೋರೇಲಿಂಗೇಗೌಡ (60) ಹಾಗೂ ಲಕ್ಷ್ಮಮ್ಮ (52) ಆತ್ಮಹತ್ಯೆ ಮಾಡಿಕೊಂಡ ದಂಪತಿ.

ನಿನ್ನೆ ತಡರಾತ್ರಿ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಇರುವ ತಮ್ಮ ಜಮೀನಿಗೆ ತೆರಳಿದ ದಂಪತಿ, ವಿಷದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸಾಲ ಬಾಧೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಇಂದು ಬೆಳಗ್ಗೆ ಸ್ಥಳೀಯರು ಮೃತ ದೇಹಗಳನ್ನು ನೋಡಿ ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‍ಪೆಕ್ಟರ್ ಎಚ್.ಬಿ.ವೆಂಕಟೇಶಯ್ಯ, ಸಬ್‍ಇನ್ಸ್‍ಪೆಕ್ಟರ್ ಆನಂದಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು. ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು.

Facebook Comments