ಪ್ಯಾರಾ ಒಲಂಪಿಕ್ ಕ್ರೀಡಾಪಟುಗಳಿಗೆ ಡಿಸಿಎಂ ಪರಮೇಶ್ವರ್ ಸನ್ಮಾನ

ಈ ಸುದ್ದಿಯನ್ನು ಶೇರ್ ಮಾಡಿ

parmesparಬೆಂಗಳೂರು, ನ.20-ರಾಜ್ಯ ಸರ್ಕಾರ ಪ್ಯಾರಾ ಒಲಂಪಿಕ್ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸೌಲಭ್ಯ ಹಾಗೂ ನೆರವು ನೀಡಲು ಸಿದ್ಧವಿದೆ. ಈ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ನಿರ್ಮಿಸುವ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಕ್ರೀಡಾ ಮತ್ತು ಯುವಜನ ಸಬಲೀಕರಣ ಖಾತೆ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.

ಇಂಡೋನೇಷ್ಯಾದಲ್ಲಿ ನಡೆದ ಪ್ಯಾರಾ ಏಷ್ಯನ್ ಗೇಮ್ಸ್‍ನಲ್ಲಿ ಒಂಭತ್ತು ಪದಕಗಳನ್ನು ಪಡೆದ ರಾಜ್ಯದ 7 ಮಂದಿ ವಿಶೇಷ ಚೇತನ ಕ್ರೀಡಾಪಟುಗಳಿಗೆ ತಮ್ಮ ಗೃಹ ಕಚೇರಿಯಲ್ಲಿ ಇಂದು ಸನ್ಮಾನಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ಯಾರಾ ಒಲಂಪಿಕ್ ಸೇರಿದಂತೆ ಎಲ್ಲಾ ಕ್ರೀಡಾಪಟುಗಳಿಗೆ ಸರ್ಕಾರ ಬೆಂಬಲ ನೀಡಲಿದೆ. ಕಳೆದ ವರ್ಷ ಕ್ರೀಡಾ ಸಲಕರಣೆಗಳ ಖರೀದಿಗೆ 4 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಈ ಹಣ ಸಂಪೂರ್ಣವಾಗಿ ಖರ್ಚು ಮಾಡಲಾಗಿದೆ. ಈ ವರ್ಷವೂ ಸಲಕರಣೆಗಳ ಖರೀದಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಪ್ಯಾರಾ ಒಲಂಪಿಕ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ನಿರ್ಮಿಸಬೇಕೆಂಬ ಕ್ರೀಡಾಪಟುಗಳ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಕ್ರೀಡಾ ಪ್ರೋತ್ಸಾಹಕ ಯೋಜನೆಗಳನ್ನು ತಯಾರಿಸುವಾಗ ಈ ಪ್ರಸ್ತಾಪದ ಬಗ್ಗೆ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು. ರಾಜ್ಯದ 7 ಮಂದಿ ಕ್ರೀಡಾಪಟುಗಳು ದೇಶ ಮತ್ತು ರಾಜ್ಯಕ್ಕೆ ಗೌರವ ತಂದುಕೊಟ್ಟಿದ್ದಾರೆ. ಅದೇ ರೀತಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ ಪದಕ ಗಳಿಸುವಂತೆ ಮಾಡಿದ ಮಹದೇವ್, ಸತ್ಯನಾರಾಯಣ್, ರವಿಕುಮಾರ್ ಅವರಿಗೂ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )