ಚಿಕಾಗೋ : ಗುಂಡಿನ ದಾಳಿಯಲ್ಲಿ ಹಂತಕ ಸೇರಿ ಇಬ್ಬರ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

usaಚಿಕಾಗೋ,ನ.20- ನಗರದ ದಕ್ಷಿಣ ಭಾಗದಲ್ಲಿರುವ ಮರ್ಸಿ ಆಸ್ಪತ್ರೆಯ ಎದುರು ದುಷ್ಕರ್ಮಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರಿಂದ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ದುಷ್ಕರ್ಮಿಯನ್ನು ಹತ್ಯೆಗೈದಿದ್ದು, ಕಾರ್ಯಾಚರಣೆ ವೇಳೆ ಪೊಲೀಸ್ ಸಿಬಂದಿಯೊಬ್ಬರು ಗಾಯಗೊಂಡಿದ್ದಾರೆ. ಪಾರ್ಕಿಂಗ್ ಪ್ರದೇಶದಲ್ಲಿ ಆಸ್ಪತ್ರೆಯ ಸಿಬಂದಿಗಳನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದೆ. ಆಸ್ಪತ್ರೆಯಲ್ಲಿರುವ ಎಲ್ಲಾ ರೋಗಿಗಳು ಸುರಕ್ಷಿತವಾಗಿದ್ದಾರೆ ಎಂದು ಚಿಕಾಗೋ ಪೊಲೀಸರು ತಿಳಿಸಿದ್ದಾರೆ. ಯಾವ ಉದ್ದೇಶಕ್ಕಾಗಿ ದಾಳಿ ನಡೆದಿದೆ ಎಂಬುದಕ್ಕೆ ಕಾರಣ ತಿಳಿದುಬಂದಿಲ್ಲ.

Facebook Comments