ಬೆಳಗಾವಿ ಅಧಿವೇಶನಕ್ಕೆ ಸಕಲ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

Basavaraj. horattiಬೆಳಗಾವಿ,ನ.20- ಡಿಸೆಂಬರ್ 10 ರಿಂದ ಬೆಳಗಾವಿಯ ಸುವರ್ಣ ವಿಧಾನಸೌದಲ್ಲಿ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ ಬಾರಿ ಆಗಿರುವ ತಪ್ಪು ಈ ಬಾರಿ ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಈ ಬಾರಿ ಶಾಸಕರು, ಅಧಿಕಾರಿಗಳು ಹಾಗೂ ಪತ್ರಕರ್ತರಿಗೆ ಕರಾವಳಿ, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಶೈಲಿನ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

Facebook Comments