ಬಸ್-ಲಾರಿ ಮುಖಾಮುಖಿ ಡಿಕ್ಕಿ : ಚಾಲಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

bus &loyreಬೆಳಗಾವಿ, ನ.20- ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ ಸುಮಾರು 10 ಮಂದಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಶ್ರೀನಗರ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಪ್ರಸಾದ್ (40) ಮೃತಪಟ್ಟ ಬಸ್ ಚಾಲಕ. ಮೈಸೂರಿನಿಂದ ಮುಂಬೈಗೆ ಬಸ್ ತೆರಳುತ್ತಿದ್ದಾಗ ಒನ್ ವೇ ಮಾರ್ಗದಲ್ಲಿ ಲಾರಿಯೊಂದು ಚಲಿಸುತ್ತಿದ್ದಾಗ ಲಾರಿ-ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು ,ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಮಾಳ ಮಾರುತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments