ಮೆಡಿಕಲ್ ಸ್ಟೋರ್ ನಲ್ಲಿ ಬೆಂಕಿ, ಔಷಧಿಗಳು ಭಸ್ಮ

ಈ ಸುದ್ದಿಯನ್ನು ಶೇರ್ ಮಾಡಿ

fierಬೆಂಗಳೂರು,ನ.21- ಮೆಡಿಕಲ್ ಸ್ಟೋರ್‍ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾರ ಪ್ರಮಾಣದ ಔಷಧಿಗಳು ಸುಟ್ಟಹೋಗಿರುವ ಘಟನೆ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಎ.ನಾರಾಯಣಪುರದ ವಾಟರ್‍ಟ್ಯಾಂಕ್‍ನ ಪಿಡಬ್ಲೂಡಿ ರಸ್ತೆಯಲ್ಲಿರುವ ಮೆಡಿಕಲ್ ಸ್ಟೋರ್‍ನಲ್ಲಿ ಬೆಳಗಿನ ಜಾವ 12.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ.  ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲೇ ಅಪಾರ ಪ್ರಮಾಣದ ಔಷಧಿಗಳು ಬೆಂಕಿಗೆ  ಹುತಿಯಾಗಿತ್ತು.  ಶಾರ್ಟ್‍ಸಕ್ರ್ಯೂಟ್‍ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಹದೇವಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.
#ಕಾರಿಗೆ ಬೆಂಕಿ:
ಕೆಜಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋವಿಂದಪುರ ಸಿಗ್ನಲ್ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಸ್ಥಳದಲ್ಲೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅಗ್ನಿಶಾಮಕ ದಳವರು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದರಾದರೂ ಭಾಗಶಃ ಕಾರು ಸುಟ್ಟುಹೋಗಿದೆ.
ಬ್ಯಾಟರಿ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

Facebook Comments