ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಂಪ್ಲೇಂಟ್

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಮೈಸೂರು, ನ.21- ಕೃಷಿ ಭೂಮಿಯಲ್ಲಿ ಮನೆ ನಿರ್ಮಿಸಿದ್ದಾರೆ ಎಂಬ ಆರೋಪ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಕಷ್ಟಕ್ಕೀಡು ಮಾಡುವ ಸಾಧ್ಯತೆ ಕಾಣುತ್ತಿದೆ. ನಿಯಮ ಉಲ್ಲಂಘಿಸಿ ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ನೀಡಿದ್ದ ದೂರಿನ ತನಿಖೆಯ ಪ್ರಗತಿ ಬಗ್ಗೆ ಮೈಸೂರು ಪೊಲೀಸ್ ಆಯುಕ್ತರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಪತ್ರ ಬರೆದು, ಸ್ಪಷ್ಟೀಕರಣ ಕೇಳಿದ್ದರು. ಮಾತ್ರವಲ್ಲ ಪ್ರಕರಣವನ್ನು ಸಿಬಿಐಗೆ ವಹಿಸುವ ಕುರಿತೂ ಅಭಿಪ್ರಾಯವನ್ನು ಕೇಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣ ಮಾಡಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಗಂಗರಾಜು ಎಂಬವರು ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ಜುಲೈ 23 ರಂದು ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ಪ್ರಗತಿ ಕಂಡಿಲ್ಲ ಎಂದು ಆರೋಪಿಸಿ ಗಂಗರಾಜು ಅವರು ಡಿಜಿಪಿ ಅವರನ್ನು ಭೇಟಿ ಮಾಡಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದರು.

ಮೈಸೂರಿನ ವಿಜಯನಗರದಲ್ಲಿರುವ ಸಿದ್ದರಾಮಯ್ಯ ನಿವಾಸದ ಜಾಗದ ಕುರಿತಾಗಿ ಅಕ್ರಮ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ನಗರದ ಗಂಗರಾಜು ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳುವಂತೆ ಮೈಸೂರು ನ್ಯಾಯಾಲಯದ ಮೊರೆ ಹೋಗಿದ್ದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಶಪಡಿಸಿಕೊಂಡಿದ್ದ ಜಾಗವನ್ನು ಸಿದ್ದರಾಮಯ್ಯ ಪ್ರಭಾವ ಬಳಸಿ ಡಿನೋಟಿಫೈ ಮಾಡಿಸಿದ್ದಾರೆ. ಅದೇ ಜಾಗವನ್ನು ಸಿದ್ದರಾಮಯ್ಯ ಖರೀದಿ ಮಾಡಿ ಮನೆ ಕಟ್ಟಿದ್ದಾರೆ.

ಅಷ್ಟೇ ಅಲ್ಲದೇ ನಗರಾಭಿವೃದ್ಧಿ ಪ್ರಾಧಿಕಾರದ ಅನುಮತಿ ಪಡೆಯದೇ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿದ್ದಾರೆ ಎಂದು ಗಂಗರಾಜು ಆರೋಪ ಮಾಡಿದ್ದರು. 30 ಗುಂಟೆ ಜಾಗ ಅದರ ಸುತ್ತಾ 400-500 ಎಕರೆ ಜಾಗವನ್ನು ಭೂಸ್ವಾಧಿನ ಮಾಡಿಕೊಳ್ಳುತ್ತಾರೆ. ಅದರಲ್ಲಿ ಲೇಔಟ್ ಮಾಡಲು ನಿರ್ಧಾರ ಮಾಡಿದ್ದರು. ಆದರೆ ಈ 30 ಗುಂಟೆ ಜಾಗವನ್ನು ಭೂಸ್ವಾಧಿನ ಮಾಡಿಕೊಳ್ಳದೇ ಪರೋಕ್ಷವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿದ್ದರು.

Facebook Comments