ಮಂಗಳೂರಲ್ಲಿ ಅನಿಲ ಟ್ಯಾಂಕರ್ ಪಲ್ಟಿ, ತಪ್ಪಿದ ಅನಾಹುತ

ಈ ಸುದ್ದಿಯನ್ನು ಶೇರ್ ಮಾಡಿ

Gas

ಮಂಗಳೂರು, ನ.21-ಅನಿಲ ಟ್ಯಾಂಕರ್‍ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯುಂಟಾದ ಘಟನೆ ಇಂದು ಮಂಗಳೂರು-ಉಡುಪಿ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಎಂಆರ್‍ಪಿಎಲ್‍ನಿಂದ ಅನಿಲ ತುಂಬಿಸಿಕೊಂಡು ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನಂತೂರ್ ಸರ್ಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.ಅನಿಲ ಸೋರಿಕೆ ಭೀತಿಯಿಂದ ಪರಿಸರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಅದೃಷ್ಟವಶಾತ್ ಅನಿಲ ಸೋರಿಕೆಯಾಗಿಲ್ಲ.

ಕುಲಶೇಖರದಿಂದ ಹಿಡಿದು ಪಡೀಲುವರೆಗೆ ವಾಹನ ಸಾಲುಗಟ್ಟಿ ನಿಂತಿದ್ದವು. ವಿಷಯ ತಿಳಿದ ತಕ್ಷಣ ಎಂಆರ್‍ಪಿಎಲ್ ಸಿಬ್ಬಂದಿ, ಅಗ್ನಿಶಾಮಕದಳದ ಸಿಬ್ಬಂದಿ ಕ್ರೇನ್ ಮೂಲಕ ಟ್ಯಾಂಕರ್‍ನ್ನು ರಸ್ತೆಯಿಂದ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

WhatsApp Image 2018-11-21 at 10.13.27 AM WhatsApp Image 2018-11-21 at 10.14.48 AM(1) WhatsApp Image 2018-11-21 at 10.14.48 AM(2)

Facebook Comments

Sri Raghav

Admin