ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರಿಂದ ಈದ್ ಮುಬಾರಕ್

ಈ ಸುದ್ದಿಯನ್ನು ಶೇರ್ ಮಾಡಿ

Eid-ul-Milad

ನವದೆಹಲಿ, ನ.21-ಪ್ರವಾದಿ ಮಹಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ಇಂದು ದೇಶಾದ್ಯಂತ ಈದ್ ಮಿಲಾದ್ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೇಶದ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಶುಭ ಕೋರಿದ್ದಾರೆ.

ಮಾಜಿ ಪ್ರಧಾನಿಗಳಾದ ಡಾ. ಮನಮೋಹನ್ ಸಿಂಗ್, ಎಚ್.ಡಿ.ದೇವೇಗೌಡರು, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆ ವಿರೋಧಪಕ್ಷದ ನಾಯಕ ಗುಲಾಂ ನಬಿ ಅಜಾದ್, ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ, ಮೋದಿ ಮಂತ್ರಿಮಂಡಲದ ಸಚಿವರು, ವಿವಿಧ ಪಕ್ಷಗಳ ಮುಖಂಡರೂ ಸೇರಿದಂತೆ ಅನೇಕ ಗಣ್ಯರು ಮಿಲಾದ್-ಉನ್-ನಬಿ ಶುಭಾಶಯ ಸಲ್ಲಿಸಿದ್ದಾರೆ.

ಪ್ರವಾದಿ ಮಹಮದ್ ಪೈಗಂಬರ್ ಅವರು ಮನುಕುಲಕ್ಕೆ ವಿಶ್ವ ಭಾತೃತ್ವ ಮಾರ್ಗ ತೋರಿದ ಮಹಾಪುರುಷರು. ಅವರ ಆದರ್ಶ ಬೋಧನೆಗಳು ಮತ್ತು ಉದಾತ್ತ ತತ್ತ್ವಾದರ್ಶಗಳನ್ನು ಜನರು ಪಾಲಿಸಬೇಕೆಂದು ಗಣ್ಯರು ಕರೆ ನೀಡಿದ್ದಾರೆ.

Facebook Comments

Sri Raghav

Admin