ಅಂತರ್ಜಾತಿ ವಿವಾಹವಾಗಿದ್ದ ಯುವಕನ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

murderದೇವನಹಳ್ಳಿ,ನ.21- ಅಂತರ್ಜಾತಿ ವಿವಾಹವಾಗಿದ್ದ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮರ್ಯಾದ ಹತ್ಯೆ ಎಂದು ಶಂಕಿಸಲಾಗಿದೆ. ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಗ್ರಾಮದ ಹರೀಶ್(27) ಕೊಲೆಯಾದ ಯುವಕ.  ಇತ್ತೀಚೆಗಷ್ಟೇ ಹರೀಶ್ ಅಂತರ್ಜಾತಿ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ.

ಹಲವು ಬಾರಿ ಈತನಿಗೆ ಬೆದರಿಕೆ ಕರೆ ಬರುತ್ತಿತ್ತು ಎನ್ನಲಾಗಿದೆ. ಈ ನಡುವೆ ರಾತ್ರಿ ಹೊರಗೆ ಹೋಗಿದ್ದ ಹರೀಶ್ ಮನೆಗೆ ವಾಪಸ್ಸಾಗಿರಲಿಲ್ಲ. ಇಂದು ಬೆಳಗಿನ ಜಾವ ತಾಲ್ಲೂಕಿನ ಹೊರವಲಯದ ತೋಟವೊಂದರ ಬಳಿ ಈತನ ಶವ ಪತ್ತೆಯಾಗಿದೆ. ದಾರಿಹೋಕರು ಶವ ಕಂಡು ಪೊಲೀಸರಿಗೆ ತಿಳಿಸಿದ್ದಾರೆ. ದುಷ್ಕರ್ಮಿಗಳು ಹರೀಶ್‍ನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವುದು ಕಂಡುಬಂದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿ ಕೊಲೆ ಆರೋಪಿಗಳಾಗಿ ತನಿಖೆ ಕೈಗೊಂಡಿದ್ದಾರೆ.

ಪೋಷಕರ ಆಕ್ರೋಶ:
ಮಗ ಕೊಲೆಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂಧನ ಮುಗಿಲು ಮುಟ್ಟಿತ್ತು. ನನ್ನ ಮಗನನ್ನು ಹುಡುಗಿ ಸಂಬಂಧಿಕರೇ ಕೊಲೆ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ. ನನ್ನ ಮಗನ ಕೊಲೆ ಮರ್ಯಾದ ಹತ್ಯೆಯಾಗಿದೆ. ಕೂಡಲೇ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಮೃತನ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )