ಸಿಲಿಂಡರ್ ಸ್ಫೋಟ : ಗೃಹಿಣಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

21.KRP.03

ಕೆಆರ್ ಪೇಟೆ, ನ.22- ಪಟ್ಟಣದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗೃಹಿಣಿ ಗಂಭೀರವಾಗಿ ಗಾಯಗೊಂಡಿದ್ದ ಗೃಹಿಣಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಟ್ಟಣದ ಕ್ರಿಶ್ಚಿಯನ್ ಕಾಲೋನಿಯ ಆಂಥೋನಿಯಮ್ಮ (50) ಮೃತಪಟ್ಟ ಗೃಹಿಣಿ.
ಆಂಥೋನಿಯಮ್ಮ ಅವರು ಪಟ್ಟಣದ ನಂಜಮ್ಮ ಮುದ್ದೇಗೌಡ ಸಮುದಾಯ ಭವನದ ಬಳಿ ಇರುವ ಕ್ರಿಶ್ಚಿಯನ್ ಕಾಲೋನಿಯಲ್ಲಿರುವ ತಮ್ಮ ಮನೆಯಲ್ಲಿ ಅಡುಗೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಶೇ.80ರಷ್ಟು ಮೈಮೇಲೆ ಸುಟ್ಟ ಗಾಯಗಳಾಗಿ ಅಸ್ವಸ್ಥಗೊಂಡಿದ್ದರು.  ಕೂಡಲೇ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗz ಮೃತಪಟ್ಟಿದ್ದಾರೆ ಎಂದು ಮೃತರ ಪುತ್ರ ಪೀಟರ್ ಪಟ್ಟಣ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )