ಸೇನಾ ಶಿಬಿರದ ಮೇಲೆ ಉಗ್ರರ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

armyಶ್ರೀನಗರ, ನ.22- ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕುಲ್ಗಾಮ್ ಜಿಲ್ಲಾ  ಸೇನಾ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕುಲ್ಗಾಮ್ ಜಿಲ್ಲಾ ಯ ಖುದ್ವಾನಿ ಪ್ರದೇಶದಲ್ಲಿರುವ ಸೇನಾ ಶಿಬಿರದ ಬಳಿ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಉಗ್ರರ ವಿರುದ್ಧ ಸೇನಾಪಡೆಗಳು ಕಾರ್ಯಾಚರಣೆಗಿಳಿದಿವೆ. ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ. ಇನ್ನು ದಾಳಿಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Facebook Comments