ಇಂದು ಸಂವಿಧಾನ ದಿನಾಚರಣೆ : ಡಾ.ಅಂಬೇಡ್ಕರ್ ಅವರಿಗೆ ಗಣ್ಯರ ಗೌರವ ನಮನ

ಈ ಸುದ್ದಿಯನ್ನು ಶೇರ್ ಮಾಡಿ

ambedkar

ನವದೆಹಲಿ, ನ.26- ಇಂದು ಸಂವಿಧಾನ ದಿನಾಚರಣೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಜನತಂತ್ರ ವ್ಯವಸ್ಥೆಯ ಪವಿತ್ರ ಗ್ರಂಥ ಸಂವಿಧಾನವನ್ನು ಅನುಷ್ಠಾನಗೊಳಿಸಿದ ದಿನ. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಡಾ.ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ. ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಅನೇಕ ಗಣ್ಯರು ಸಂವಿಧಾನ ರಚಿಸಿದ ಡಾ.ಅಂಬೇಡ್ಕರ್ ಮತ್ತು ಇತರ ಮೇಧಾವಿಗಳಿಗೆ ಗೌರವ ಸಮರ್ಪಿಸಿದ್ದಾರೆ.  ಸಂವಿಧಾನದ ಪಾವಿತ್ರತೆಯನ್ನು ರಕ್ಷಿಸುವುದು ಭಾರತದ ಪ್ರತಿಯೊಬ್ಬರ ಕರ್ತವ್ಯ, ದೇಶದ ಸಾರ್ವಭೌಮತ್ವ, ಸಮಾಜವಾದ, ಜಾತ್ಯತೀತತೆ, ಪ್ರಜಾಪ್ರಭುತ್, ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ, ಸೌಹಾರ್ದತೆ ಹಾಗೂ ಸಮಾನತೆಯನ್ನು ಭಾರತದ ಪ್ರಜೆಗಳು ಸಂರಕ್ಷಿಸಲು ನೆರವಾಗಬೇಕೆಂದು ಗಣ್ಯರು ಕರೆ ನೀಡಿದ್ದಾರೆ.

Facebook Comments