ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ನಡುರಸ್ತೆಯಲ್ಲೇ ಕುತ್ತಿಗೆಗೆ ಮಚ್ಚಿನಿಂದ ಹೊಡೆದು ಕೊಲೆ..!

ಈ ಸುದ್ದಿಯನ್ನು ಶೇರ್ ಮಾಡಿ

Doddaballapur--01

ದೊಡ್ಡಬಳ್ಳಾಪುರ,ನ.28- ಶಾಲೆಗೆ ಹೋಗುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಬಂದ ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಆಕೆಯ ಕುತ್ತಿಗೆಗೆ ಮಚ್ಚಿನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿನಾಯಕನಗರದ ನಿವಾಸಿ ಕೀರ್ತನಾ(15) ಕೊಲೆಗೀಡಾದ ವಿದ್ಯಾರ್ಥಿನಿ.

ಹಾಡಹಗಲೇ ನಡೆದ ಈ ಘಟನೆಯಿಂದ ನಗರದಜನರು ಬೆಚ್ಚಿಬಿದ್ದಿದ್ದು, ಸಹಪಾಠಿಗಳು ಮತ್ತು ಶಾಲೆಯ ಶಿಕ್ಷಕರು ಆತಂಕಗೊಂಡಿದ್ದಾರೆ. ಎಂದಿನಂತೆ ಇಂದು ಬೆಳಗ್ಗೆ ಶಾಲೆಗೆ ಹೋಗುತ್ತಿದ್ದಾಗ ರೋಜಿಪುರದ ಉರ್ದುಶಾಲೆ ಬಳಿ ಹಿಂಬಾಲಿಸಿಕೊಂಡು ಬಂದ ಅಪರಿಚಿತ ಮಚ್ಚಿನಿಂದ ಆಕೆಯ ಕುತ್ತಿಗೆ ಕಡಿದು ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಕೀರ್ತನಾಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ಯದರಾದರೂ ಅಷ್ಟರಲ್ಲಿ ಆಕೆ ಅಸುನೀಗಿದ್ದಳು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ವಿಷಯ ತಿಳಿದ ತಕ್ಷಣ ವೃತ್ತ ನಿರೀಕ್ಷಕ ಸಿದ್ದರಾಜು ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ.

# ಶಾಲೆಯಲ್ಲಿ ನೀರಸ ಮೌನ:
ವಿದ್ಯಾರ್ಥಿನಿ ಕೀರ್ತನಾ ಹತ್ಯೆ ವಿಷಯ ತಿಳಿಯುತ್ತಿದ್ದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮಮ್ಮಲ ಮರುಗಿದ್ದು, ಶಾಲೆಗೆ ರಜೆ ಘೋಷಿಸಲಾಗಿದೆ. ಆಕೆಯ ಸಹಪಾಠಿಗಳು ದುಃಖ ತಾಳಲಾರದೆ ಬಿಕ್ಕಿ ಬಿಕ್ಕಿ ಅಳತ್ತಿದ್ದ ದೃಶ್ಯ ಕಂಡುಬಂತು. ಇಡೀ ಶಾಲೆಯಲ್ಲಿ ನೀರವ ಮೌನ ಆವರಿಸತ್ತು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin