ನಿಮಗೆ ಹಾಲು-ಬೆಲ್ಲದ ಹೆಲ್ತ್ ಸೀಕ್ರೆಟ್ ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

Milk--01

ಬೆಲ್ಲವು ಏಷ್ಯಾ, ಆಫ್ರಿಕಾ ಮತ್ತು ದಕ್ಷಿಣ ಅಮೇರಿಕಾದಲ್ಲಿ ಬಳಸಲಾಗುವ ಒಂದು ಸಾಂಪ್ರದಾಯಿಕ, ಶುದ್ಧೀಕರಿಸದ, ಅಪಕೇಂದ್ರಕವನ್ನು ಉಪಯೋಗಿಸದೆ ತಯಾರಿಸಲಾಗುವ ಸಕ್ಕರೆ. ಅದನ್ನು ನೇರ ಬಳಕೆಗಾಗಿ ತಯಾರಿಸಲಾಗುತ್ತದೆ. ಈ ಬಗೆಯ ಸಕ್ಕರೆಯು  ಮತ್ತು ಹಳುಕುಗಳ ಬೇರ್ಪಡಿಸುವಿಕೆಯಿಲ್ಲದ  ರಸದ ಸಾಂದ್ರಿತ ಉತ್ಪನ್ನ, ಮತ್ತು ಇದರ ಬಣ್ಣವು ಬಂಗಾರ ಕಂದು ಅಥವಾ ಗಾಢ ಕಂದು ಇರಬಹುದು. ಇದು 50 ಪ್ರತಿಶತದವರೆಗೆ ಸುಕ್ರೋಸ್,  20 ಪ್ರತಿಶತದವರೆಗೆ  ಸಕ್ಕರೆಗಳು, 20 ಪ್ರತಿಶತದವರೆಗೆ ತೇವಾಂಶ, ಮತ್ತು ಉಳಿದಂತೆ ಬೂದಿ, ಪ್ರೋಟೀನ್‌ಗಳು ಹಾಗೂ ಕಬ್ಬಿನ ಸಿಪ್ಪೆಯ ನಾರುಗಳಂತಹ ಇತರ ಕರಗದ ವಸ್ತುವನ್ನು ಹೊಂದಿದೆ. ಇದು ದಕ್ಷಿಣ ಭಾರತದಲ್ಲಿ ಸಕ್ಕರೆಯ ಬದಲಿಗಾಗಿಯೂ ಬಳಸುತ್ತಾರೆ.

ಬೆಲ್ಲ ಕೇವಲ ಸಿಹಿ ಪದಾರ್ಥವಾಗಿರದೆ, ಔಷಧಿಯುಕ್ತ ಸಿಹಿಯಾಗಿದೆ. ನೋಡಲಿಕೆ ಕಂದು ಅಥವಾ ಕಪ್ಪಗಿರುವ ಕಾರಣ ಯುವಪೀಳಿಗೆಯವರು ಬೆಲ್ಲ ತಿನ್ನಲು ಹಿಂದೇಟು ಹಾಕುತ್ತಿರಬಹುದು.  ಬೆಲ್ಲವನ್ನು ನೀರಿನೊಂದಿಗೆ ಸೇವಿಸುವ ಬದಲಿಗೆ ಹಾಲಿನೊಂದಿಗೆ ಸೇವಿಸಿದರೆ ಉತ್ತಮ ಎಂಬ ಅಂಶವನ್ನು ಆಯುರ್ವೇದ ಪ್ರತಿಪಾದಿಸುತ್ತದೆ. ಸಕ್ಕರೆ ಸೇವನೆಯಿಂದ ದೇಹದ ತೂಕ ಹೆಚ್ಚುವುದು ಖಚಿತ. ಆದರೆ, ಬೆಲ್ಲ ಸೇವನೆಯಿಂದ ಈ ರೀತಿಯ ಪ್ರಮಾದ ಆಗುವುದಿಲ್ಲ.

ಹಾಲು ಮತ್ತು ಬೆಲ್ಲ ಸೇರಿದರೆ, ಎರಡರಲ್ಲಿನ ಉತ್ತಮ ಗುಣಗಳು ದೇಹಕ್ಕೆ ಸೇರ್ಪಡೆಯಾಗುತ್ತವೆ. ಪ್ರತಿದಿನ ಒಂದು ತುಂಡು ಬೆಲ್ಲವನ್ನು ಕುಟ್ಟಿ ಪುಡಿಮಾಡಿ ಹಾಲಿನ ಜತೆ ಬೆರೆಸಿ ಕುಡಿದರೆ, ಆರೋಗ್ಯ ಸುಧಾರಣೆಯುತ್ತ ಪರಿಣಾಮ ಬೀರಲಿದೆ.ವಿಶೇಷವಾಗಿ ಮಹಿಳೆಯರು, ಮಾಸಿಕ ದಿನಗಳಲ್ಲಿ ಅನುಭವಿಸುವ ನೋವನ್ನು ಬೆಲ್ಲದಷ್ಟು ಸಮರ್ಥವಾಗಿ ಕಡಿಮೆಗೊಳಿಸುವ ಔಷಧಿ ಇನ್ನೊಂದಿಲ್ಲ ಎಂಬ ಮಾತಿದೆ. ಸಂಧಿವಾತ, ಅಸ್ತಮಾಗಳಿಗೂ ಬೆಲ್ಲ ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ.

ಬೆಲ್ಲ ಮಿಶ್ರಿತ ಹಾಲಿನ ಜತೆಗೆ ಚಿಕ್ಕದೊಂದು ಶುಂಠಿ ತುಂಡನ್ನು ಸೇರಿಸಿ ಕುಡಿದರೆ, ಮೂಳೆಗಳ ಸಂದುಗಳಲ್ಲಿ ಆಗುವ ನೋವನ್ನು ಕ್ರಮೇಣ ನಿವಾರಿಸಲಿದೆ. ಪ್ರತಿನಿತ್ಯ ಈ ಅಭ್ಯಾಸವನ್ನು ರೂಢಿಸಿಕೊಂಡರೆ ಒಳ್ಳೆಯದು. ಪ್ರತಿಯೊಬ್ಬರ ಮನೆಗಳಲ್ಲೂ ಲಭ್ಯವಾಗುವ ಬೆಲ್ಲವನ್ನು ಮನೆಮದ್ದಿನ ರೂಪದಲ್ಲಿ ಉಪಯೋಗಿಸುವ ಮೂಲಕ, ಹಲವು ಬಗೆಯ ಸಮಸ್ಯೆಗಳನ್ನು ದೂರವಿಡಬಹುದು.

ಸಿಹಿ ಮೊಸರಿನೊಂದಿಗೆ ಸ್ವಲ್ಪ ಬೆಲ್ಲವನ್ನು ಕುದಿಸಿ ಸೇವಿಸುವುದರಿಂದ ಮೂಗಿನಿಂದ ಸಿಂಬಳ ಸುರಿಯುತ್ತಿದ್ದರೆ ಕಡಿಮೆಯಾಗುವುದು. ಹಸುವಿನ ತುಪ್ಪದಲ್ಲಿ ಅಷ್ಟೇ ಗಾತ್ರ ಬೆಲ್ಲ ಸೇರಿಸಿ ಪ್ರತಿದಿನ ಬೆಳಗ್ಗೆ ಸೇವಿಸಿ, ಈ ಕ್ರಮ ನಾಲ್ಕೈದು ದಿನಗಳು ಅನುಸರಿಸಿದರೆ ತಲೆನೋವು ಗುಣವಾಗುವುದು. ಒಂದು ವರ್ಷ ಹಳೆಯದಾದ ಬೆಲ್ಲವು ಹೆಚ್ಚು ಗುಣಕಾರಿ, ಈ ಬೆಲ್ಲ ಮತ್ತು ಕರಿಯಳ್ಳು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಹಾಲಿನೊಂದಿಗೆ ನುಣ್ಣಗೆ ಅರೆಯಿರಿ, ಈ ಚಟ್ನಿಗೆ ತುಪ್ಪ ಸೇರಿಸಿ ಕಾಯಿಸಿ ಬಿಸಿಯಾಗಿರುವಾಗಲೇ ಹಣೆಗೆ, ಕಪಾಲಗಳಿಗೆ ಹಚ್ಚಿ ತಲೆನೋವು ನಿವಾರಣೆಯಾಗುವುದು.

ಸ್ವಲ್ಪ ತುಪ್ಪದೊಂದಿಗೆ ಬೆಲ್ಲವನ್ನು ಕುದಿಸಿ ಬಿಸಿ ಮಾಡಿ, ಬಿಸಿಯಾದ ಈ ಮಿಶ್ರಣವನ್ನು ಹುಳುಕಿರುವ ಭಾಗಕ್ಕೆ ಲೇಪಿಸಿ ಕಟ್ಟು ಕಟ್ಟುವುದರಿಂದ ಗುಣ ಕಂಡು ಬರುವುದು. ಸಕ್ಕರೆ ಪಾನಕಕಿಂತ ಬೆಲ್ಲದ ಪಾನಕ ಉತ್ತಮ,

Facebook Comments