ಕೆಜಿಎಫ್ ಚಿತ್ರದ 2ನೇ ಟ್ರೈಲರ್ ರಿಲೀಸ್, ಯೂಟ್ಯೂಬ್’ನಲ್ಲಿ ಸಂಚಲನ

ಈ ಸುದ್ದಿಯನ್ನು ಶೇರ್ ಮಾಡಿ

KGF--01

ಬೆಂಗಳೂರು,. ಡಿ . 05 : ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರದ ಎರಡನೇ ಟ್ರೈಲರ್ ರಿಲೀಸ್ ಆಗಿದೆ, ಹಿಂದಿ ಭಾಷೆಯಲ್ಲಿ ರಿಲೀಸ್ ಆಗಿರುವ ಈ ಟ್ರೈಲರ್ ಮೈನವಿರೇಳಿಸುವ ಆಕ್ಷನ್ ದೃಶ್ಯಗಳನ್ನು ಹೊತ್ತು ತಂದಿದೆ. ನಿನ್ನೆಯಷ್ಟೇ ಒಂದು ಲಿರಿಕಲ್ ಸಾಂಗ್ ಬಿಡುಗಡೆಯಾಗಿತ್ತು, ಅದರ ಬೆನ್ನಲ್ಲೇ ಇಂದು ಹಿಂದಿ ಅವತರಣಿಕೆಯ 2 ನೇ ಟ್ರೈಲರ್ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ.

ಇದಕ್ಕೂ ಮೊದಲು ಈ ಕುರಿತು ಬಾಲಿವುಡ್ ನಟ ಫರಾನ್ ಅಕ್ತರ್ ತಮ್ಮ ಟ್ವೀಟರ್ ಖಾತೆಯಲ್ಲಿ ಅನೌನ್ಸ್ ಮಾಡಿದ್ದರು. ಅತಿದೊಡ್ಡ ಪ್ರದರ್ಶನಕ್ಕೆ ನೀವು ಸಾಕ್ಷಿಯಾಗಿ, ನಾಳೆ ಕೆಜಿಎಫ್ ಚಿತ್ರದ 2 ನೇ ಟ್ರೈಲರ್ ರಿಲೀಸ್ ಆಗುತ್ತಿದೆ ಎಂದು ಬರೆದುಕೊಂಡಿದ್ದರು. ಹಿಂದಿಯಲ್ಲಿ ಕೆಜಿಎಫ್ ಚಿತ್ರದ ವಿತರಣೆಯ ಹಕ್ಕುಗಳನ್ನು ಫರಾನ್ ಅಖ್ತರ್ ಪಡೆದುಕೊಂಡಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿರುವ ಈ ಚಿತ್ರ ಕನ್ನಡ ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಇದೆ ತಿಂಗಳ 21 ರಂದು ಬಿಡುಗಡೆಯಾಗಲಿದೆ.

# ಸಲಾಮ್ ರಾಕಿ ಭಾಯ್ ಸದ್ದು :
ಚಿತ್ರದ ‘ಸಲಾಮ್ ರಾಕಿ ಭಾಯ್’ ಹಾಡಿನ ಲಿರಿಕಲ್ ವಿಡಿಯೋ ರಿಲೀಸ್ ಆಗಿದ್ದು, ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲವನ್ನು ಹೆಚ್ಚು ಮಾಡುವಂತೆ ಮಾಡಿದೆ. ಕೋಲಾರದ ಕೆಜಿಎಫ್‍ನ ಓರ್ವ ಸಾಮಾನ್ಯ ಹುಡುಗ ಮುಂಬೈ ಭೂಗತ ಲೋಕದ ಅಧಿಪತಿ ಆದಾಗ ಚಿತ್ರದಲ್ಲಿ ಈ ಹಾಡು ಬರುತ್ತೆ ಎಂದು ಹೇಳಲಾಗುತ್ತಿದೆ. ಹಾಡಿನ ಪ್ರತಿಯೊಂದು ಸಾಲುಗಳು ಭೂಗತ ಲೋಕದ ಅಧಿಪತಿಯಾದ ರಾಕಿಯನ್ನು ವರ್ಣನೆ ಮಾಡುತ್ತಿವೆ. ಹಾಡಿನ ಚಿತ್ರೀಕರಣ ಸಂಪೂರ್ಣ 70ರ ದಶಕದ ಮಾದರಿಯಲ್ಲಿ ಮೂಡಿ ಬಂದಿದೆ.

ವಿ ನಾಗೇಂದ್ರ ಪ್ರಸಾದ್ ಬರೆದಿರುವ ‘ಸಲಾಮ್ ರಾಕಿ ಭಾಯ್’ ಹಾಡಿಗೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ವಿಜಯ್ ಪ್ರಕಾಶ್ ಸೇರಿದಂತೆ ಸಂತೋಷ್ ವೆಂಕಿ, ಸಚಿನ್ ಬಸ್ರೂರು, ಪುನೀತ್ ರುದ್ರಂಗ, ಮೋಹನ್, ಎಚ್ ಶ್ರೀನಿವಾಸ್ ಮೂರ್ತಿ, ವಿಜಯ್ ಅರಸ್ ಈ ಹಾಡಿಗೆ ಧ್ವನಿಗೂಡಿಸಿದ್ದಾರೆ.

Facebook Comments

Sri Raghav

Admin