ಡಾ.ಅಂಬೇಡ್ಕರ್ 63ನೇ ಮಹಾಪರಿನಿರ್ವಾಣ ದಿನ : ಗಣ್ಯಾತಿಗಣ್ಯರ ಶ್ರದ್ದಾಂಜಲಿ

ಈ ಸುದ್ದಿಯನ್ನು ಶೇರ್ ಮಾಡಿ

63rd Mahaparinirvanaನವದೆಹಲಿ, ಡಿ.6 (ಪಿಟಿಐ)- ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ನಿಧನರಾಗಿ ಇಂದಿಗೆ 63 ವರ್ಷಗಳು(6ನೇ ಡಿಸೆಂಬರ್, 1956). ಈ ದಿನವನ್ನು ದೇಶಾದ್ಯಂತ ಮಹಾ ಪರಿನಿರ್ವಾಣ ದಿನವನ್ನಾಗಿ ಆಚರಿಸಲಾಗುತ್ತದೆ.  ರಾಜಧಾನಿ ದೆಹಲಿಯ ಸಂಸತ್ ಭವನದ ಆವರಣದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಡಾ. ಎಂ.ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಮರ್ಪಿಸಿದರು.

ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ. ಮನಮೋಹನ್ ಸಿಂಗ್, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರಾದ ಡಾ. ಎಂ ಮಲ್ಲಿಖಾರ್ಜುನ ಖರ್ಗೆ, ಗುಲಾಂನಬಿ ಅಜದ್ ಸೇರಿದಂತೆ ಅನೇಕ ಗಣ್ಯರು ಸಹ ಸಂವಿಧಾನ ಶಿಲ್ಪಿಗೆ ಶ್ರದ್ಧಾಂಜಲಿ ಸಮರ್ಪಿಸಿ ಗುಣಗಾನ ಮಾಡಿದರು.

ಇದೇ ಸಂದರ್ಭದಲ್ಲಿ ಬಾಬಾ ಸಾಹೇಬ್ ಯುವ ಸಮಿತಿ ದೇಶದ ವಿವಿಧೆಡೆ ಮನ ರ‍್ಯಾಲಿ ಆಚರಿಸಿತು. ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಅರ್ಥಪೂರ್ಣ ಕಾರ್ಯಕ್ರಮಗಳ ನಡೆದು ಸಂವಿಧಾನ ಶಿಲ್ಪಿಯ ಸಾಧನೆಯನ್ನು ಸ್ಮರಿಸಲಾಯಿತು. ದೇಶದ ಹಲವೆಡೆ ಇರುವ ಅಂಬೇಡ್ಕರ್ ಪ್ರತಿಮೆಗಳನ್ನು ವಿಶೇಷವಾಗಿ ಹೂವಿನಿಂದ ಸಿಂಗರಿಸಲಾಗಿತ್ತು. ಪುತ್ಥಳಿಗಳ ಮುಂದೆ ಶಾಂತಿ ಸಭೆಗಳು ನಡೆದವು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )