ಬಿಎಂಟಿಸಿಗೆ ವ್ಯಕ್ತಿ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.6-ಬಿಎಂಟಿಸಿ ಬಸ್ ಹತ್ತಲು ಮುಂದಾಗುತ್ತಿದ್ದಂತೆ ಬಸ್ ಚಲಿಸಿದ್ದರಿಂದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದಿದ್ದು, ಈ ವೇಳೆ ಅವರ ಮೇಲೆ ಚಕ್ರ ಹರಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬಸಪ್ಪ(35) ಎಂದು ಗುರುತಿಸಲಾಗಿದೆ.

ರಾತ್ರಿ 11 ಗಂಟೆ ಸಮಯದಲ್ಲಿ ಬಸಪ್ಪ ಅವರು ಮನೆಗೆ ಹೋಗಲು ಬಿಎಂಟಿಸಿ ಬಸ್ ಹತ್ತುತ್ತಿದ್ದಂತೆ ಬಸ್ ಚಲಿಸಿದ್ದರಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಸ್‍ನ ಹಿಂಬದಿ ಚಕ್ರ ಇವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಉಪ್ಪಾರಪೇಟೆ ಠಾಣೆ ಪೊಲೀಸರು ಬಸ್ ಚಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments