ಕೆಎಸ್‌ಆರ್‌ಟಿಸಿ ನೌಕರ ಸಾವು : ಮೃತನ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

busಮಳವಳ್ಳಿ, ಡಿ.6- ಸಹೋದ್ಯೋಗಿ ನೆರವಿಗೆ ಧಾವಿಸಿದ ಸಂಘದ ಅಧ್ಯಕ್ಷನಿಗೆ ಅಧಿಕಾರಿಗಳು ನೋಟೀಸ್ ನೀಡಿದ್ದರಿಂದ ಮನ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್‌ಆರ್‌ಟಿಸಿ ನೌಕರರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಜನೂರು ನಿವಾಸಿ ಲೋಕೇಶ್ ಆತ್ಮಹತ್ಯೆ ಮಾಡಿಕೊಂಡಿರುವ ನೌಕರ.

ಘಟನೆ ವಿವರ:

ವೆಂಕಟೇಶ್ ಮತ್ತು ಲೋಕೇಶ್ ಇಬ್ಬರು ಮಳವಳ್ಳಿ ಕೆಎಸ್‌ಆರ್‌ಟಿಸಿ ಡಿಪೊೀದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಾಂತ್ರಿಕ ವಿಭಾಗದ ಕುಮಾರ್ ನಾಯ್ಕ ಮತ್ತು ಡಿಪೊೀ ಮ್ಯಾನೇಜರ್ ಶಾಂತಕುಮಾರ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ವೆಂಕಟೇಶ್ ನ.30ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು.ಈ ವಿಚಾರವಾಗಿ ನೌಕರ ಸಂಘದ ಅಧ್ಯಕ್ಷ ಲೋಕೇಶ್ ಕೂಡ ಏಕೆ ಕಿರುಕುಳ ಕೊಡುತ್ತಿದ್ದೀರಾ ಎಂದು ಶಾಂತಕುಮಾರ್ ಮತ್ತು ಕುಮಾರ್ ನಾಯ್ಕಗೆ ಪ್ರಶ್ನೆ ಮಾಡಿದ್ದರು. ಇದಕ್ಕಾಗಿ ಲೋಕೇಶ್‍ಗೆ ನೋಟಿಸ್ ನೀಡಲಾಯಿತು.

ಇದರಿಂದ ಮನ ನೊಂದಿದ್ದ ಲೋಕೇಶ್ ಕಳೆದೆರಡು ದಿನದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಕರ್ನಾಟಕ ಪ್ರಾಂತ ರೈತ ಸಂಘ ಡಿಪೊೀ ಮುಂಭಾಗ ಜಮಾಯಿಸಿ ಶಾಂತಕುಮಾರ್ ಮತ್ತು ಕುಮಾರ್ ನಾಯ್ಕನನ್ನು ಕೂಡಲೇ ಬಂಧಿಸಬೇಕು. ಮೃತ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು. ಕುಟುಂಬದ ಒಬ್ಬರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಡಿಪೊೀ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಡಿಪೊೀದಿಂದ ಯಾವುದೇ ಗಾಡಿಗಳನ್ನು ಹೊರ ತೆಗೆದಿಲ್ಲ. ಸ್ಥಳಕ್ಕೆ ಸರ್ಕಲ್ ಇನ್ಸ್‍ಪೆಕ್ಟರ್ ಧರ್ಮೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )