ವಿಜಯ್ ಮಲ್ಯ ಅರ್ಜಿ : ಇಡಿಗೆ ಸುಪ್ರೀಂ ನೋಟಿಸ್ ಜಾರಿ

ಈ ಸುದ್ದಿಯನ್ನು ಶೇರ್ ಮಾಡಿ

Vijaya-malya

ನವದೆಹಲಿ, ಡಿ.7 (ಪಿಟಿಐ)- ತಮ್ಮನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸುವುದರ ವಿರುದ್ಧ ವಿವಾದಿತ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿರುವ ಅರ್ಜಿ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಇಂದು ಜಾರಿ ನಿರ್ದೇಶನಾಲಯಕ್ಕೆ(ಇ.ಡಿ.) ನೋಟಿಸ್ ಜಾರಿಗೊಳಿಸಿದೆ.

ಕಳಂಕಿತ ಮದ್ಯದ ದೊರೆ ಮಲ್ಯರನ್ನು ದೇಶದಿಂದ ಪಲಾಯನವಾದ ಆರ್ಥಿಕ ಅಪರಾಧಿಯನ್ನಾಗಿ ಘೋಷಿಸಲು ಮುಂಬೈನ ನ್ಯಾಯಾಲಯವೊಂದರಲ್ಲಿ ವಿಚಾರಣೆ ಮುಂದುವರಿದಿದೆ. ಇದರ ವಿರುದ್ಧ ಮಲ್ಯ ತಮ್ಮ ವಕೀಲರ ಮೂಲಕ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.  ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರನ್ನು ಒಳಗೊಂಡ ಪೀಠವು, ಇದಕ್ಕೆ ಪ್ರತ್ಯುತ್ತರ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದೆ.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಕಾಯ್ದೆ ಅನ್ವಯ ಮಲ್ಯರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿಯನ್ನಾಗಿ ಘೋಷಿಸಬೇಕೆಂದು ಇಡಿ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇದರ ವಿಚಾರಣೆ ಮುಂದುವರಿದಿದೆ.

Facebook Comments

Sri Raghav

Admin