ಶಬರಿಮಲೈ : ಕೇರಳ ಸರ್ಕಾರದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಈ ಸುದ್ದಿಯನ್ನು ಶೇರ್ ಮಾಡಿ

Supreme-Courtನವದೆಹಲಿ, ಡಿ.7 (ಪಿಟಿಐ)- ಶಬರಿಮಲೈ ದೇವಸ್ತಾನದಲ್ಲಿ ಭದ್ರತೆ ಮತ್ತು ಇತರ ಚಟುವಟಿಕೆಗಳ ಮೇಲೆ ನಿಗಾ ಇಡಲು ಮೂವರು ಸದಸ್ಯರ ಉಸ್ತುವಾರಿ ಸಮಿತಿ ನೇಮಕಕ್ಕೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕೇರಳ ಸರ್ಕಾರ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. ಇದರಿಂದ ಕೇರಳ ಸರ್ಕಾರಕ್ಕೆ ಮತ್ತೊಂದು ಹಿನ್ನಡೆಯಾಗಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠವು ಈ ಸಂಬಂಧ ಕೇರಳ ಸರ್ಕಾರ ಸಲ್ಲಿಸಿದ ಅರ್ಜಿಯ ತ್ವರಿತ ವಿಚಾರಣೆಗೆ ನಿರಾಕರಿಸಿ, ಇದನ್ನು ನಿಯತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ವಿಶ್ವವಿಖ್ಯಾತ ಶಬರಿಮಲೈನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ಭದ್ರತೆ ಮತ್ತು ಇತರ ವ್ಯವಸ್ಥೆಗಳನ್ನು ನೋಡಿಕೊಳ್ಳಲು ಮೂವರು ಸದಸ್ಯರ ಸಮಿತಿಯನ್ನು ಕೇರಳ ಹೈಕೋರ್ಟ್ ಇತ್ತೀಚಿಗೆ ನೇಮಕ ಮಾಡಿತ್ತು.

Facebook Comments