ಸೆಮಿಫೈನಲ್ ರಿಸಲ್ಟ್ ಬಂದ ಬೆನ್ನಲ್ಲೇ ದೆಹಲಿಯಲ್ಲಿ ಬಿರುಸುಗೊಂಡ ಚಟುವಟಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Modi-01

ನವದೆಹಲಿ,ಡಿ.11-ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ದೆಹಲಿಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ವರಿಷ್ಠರು ಪ್ರತ್ಯೇಕವಾಗಿ ಸಭೆ ಸೇರಿ ಸಮಾಲೋಚನೆ ನಡೆಸುತ್ತಿದ್ದಾರೆ. ಛತ್ತೀಸ್‍ಘಡದಲ್ಲಿ ಕಾಂಗ್ರೆಸ್‍ಗೆ ಸ್ಪಷ್ಟ ಬಹುಮತ ಲಭಿಸಿರುವುದರಿಂದ ಯಾರು ಮುಖ್ಯಮಂತ್ರಿಯಾಗಬೇಕು ಎಂಬ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ರಾಹುಲ್ ಗಾಂಧಿ ನೇತೃತ್ವದಲ್ಲಿ ಸಮಾಲೋಚನೆ ನಡೆಸುತ್ತಿದೆ.

ಇದೇ ವೇಳೆ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸ್ಪಷ್ಟ ಬಹುಮತಕ್ಕೆ ಅಲ್ಪ ಕೊರತೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಆಯಾ ರಾಜ್ಯಗಳಲ್ಲಿ ಇತರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ಕೈ ನಾಯಕರು ಮಹತ್ವದ ಸಭೆ ನಡೆಸುತ್ತಿದ್ದಾರೆ. ಜೊತೆಗೆ ತೆಲಂಗಾಣ ಮತ್ತು ಮಿಜೋರಾಂನಲ್ಲಿ ಕಾಂಗ್ರೆಸ್‍ಗೆ ಹಿನ್ನಡೆಯಾಗಿರುವ ಆತ್ಮಾವಲೋಕನ ನಡೆದಿದೆ.

# ಬಿಜೆಪಿ ನಾಯಕರ ಸಭೆ: ಬಿಜೆಪಿ ಭದ್ರಕೋಟೆ ಎನಿಸಿದ್ದ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‍ಘಡ ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೆಚ್ಚಾಗಿರುವುದರಿಂದ ಪರಿಸ್ಥಿತಿ ಪರಾಮರ್ಶೆಯಲ್ಲಿ ಕಮಲ ನಾಯಕರು ತೊಡಗಿದ್ದಾರೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮತ್ತೆ ಸರ್ಕಾರ ರಚಿಸಲು ಸಾಧ್ಯವಾಗಬಹುದಾದ ಎಲ್ಲ ಮಾರ್ಗೋಪಾಯಗಳನ್ನು ಬಿಜೆಪಿ ವರಿಷ್ಠರು ಹುಡುಕುತ್ತಿದ್ದಾರೆ. ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರ ಬೆಂಬಲ ಪಡೆದು ಈ ಎರಡೂ ರಾಜ್ಯಗಳಲ್ಲಿ ಅಧಿಕಾರಕ್ಕೇರುವ ಕಾರ್ಯತಂತ್ರಗಳ ಬಗ್ಗೆಯೂ ಸಮಾಲೋಚನೆ ಮುಂದುವರೆದಿದೆ.

Facebook Comments

Sri Raghav

Admin